ಚಲಿಸುತ್ತಿದ್ದ ಕಾರೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ➤ ಅದೃಷ್ಟವಶಾತ್ ಅಪಾಯದಿಂದ ಪಾರಾದ ಚಾಲಕ



(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.1.ಚಲಿಸುತ್ತಿದ್ದ ಕಾರೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಕೊಡಿಯಾಲ್ ಬೈಲು ಪ್ರದೇಶದ ಜೈಲು ರಸ್ತೆಯ ಸಮೀಪ ನಡೆದಿದೆ.







ಕಿಡಿ ಮತ್ತು ಹೊಗೆ ಕಾಣಿಸಿಕೊಂಡ ತಕ್ಷಣ ಕಾರನ್ನು ಚಲಾಯಿಸುತ್ತಿದ್ದ ಅದರ ಮಾಲಕ ವಿಕ್ರಂ ಅವರು ತಕ್ಷಣವೇ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿ ಕಾರಿನಿಂದ ಕೆಳಗೆ ಇಳಿದಿದ್ದಾರೆ. ಇದರಿಂದಾಗಿ ಸಂಭವಿಸಬಹುದಾಗಿದ್ದ ಅಪಾಯವೊಂದು ತಪ್ಪಿದೆ. ಬಳಿಕ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಕಾರಿಗೆ ವ್ಯಾಪಿಸುತ್ತಿದ್ದ ಬೆಂಕಿಯನ್ನು ನಂದಿಸಿದರು.ಕಾರಿನ ಎ.ಸಿ.ಯನ್ನು ದುರಸ್ತಿಪಡಿಸಿ ತರುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂಬುದಾಗಿ ಕಾರಿನ ಮಾಲಿಕ ವಿಕ್ರಂ ಅವರು ಪ್ರತಿಕ್ರಿಯೆ ನೀಡಿದ್ದಾರೆ.






 

error: Content is protected !!
Scroll to Top