ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ (ರಿ) ➤ಆ.3ರಂದು ಚುನಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.2.ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ (ರಿ)., ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಅಧ್ಯಕ್ಷ / ಖಜಾಂಚಿ / ರಾಜ್ಯ ಪರಿಷತ್ ಸದಸ್ಯ ಸ್ಥಾನಗಳಿಗೆ ಚುನಾವಣೆಗೆ ಸ್ಥಳೀಯ ನ್ಯಾಯಾಲಯ ನೀಡಿದ ತಡೆಯಾಜ್ಞೆಯನ್ನು ಕರ್ನಾಟಕ ಹೈಕೋರ್ಟ್ ತೆರವುಗೊಳಿಸಿದೆ.


ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಶಾಖೆ ಮಂಗಳೂರು ಇದರ ಅಧ್ಯಕ್ಷ / ಖಜಾಂಚಿ / ರಾಜ್ಯ ಪರಿಷತ್ ಸದಸ್ಯ ಸ್ಥಾನದ ಚುನಾವಣೆಯನ್ನು ಆಗಸ್ಟ್ 3 ರಂದು ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಸಭಾಂಗಣದಲ್ಲಿ ನಡೆಸಲಾಗುವುದು ಎಂದು ಚುನಾವಣಾವಣಾಧಿಕಾರಿ ಶೋಭಾ ಎನ್.ಎಸ್ ಇವರ ಪ್ರಕಟಣೆ ತಿಳಿಸಿದೆ.

Also Read  ಉಳ್ಳಾಲ: ಉಸ್ತುವಾರಿ ಸಚಿವರಿಂದ ಕಡಲ್ಕೊರೆತ ಪ್ರದೇಶ ವೀಕ್ಷಣೆ

error: Content is protected !!
Scroll to Top