ನೇತ್ರಾವತಿ ಸೇತುವೆಗೆ ಸಿಸಿಟಿವಿ ಅಳವಡಿಸುವಂತೆ ಮನವಿ ➤ ಶಾಸಕ ವೇದವ್ಯಾಸ ಕಾಮತ್

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.2.ಶುಕ್ರವಾರ ಬೆಳಿಗ್ಗೆ ಫೇಸ್‌ ಬುಕ್‌ ಪೋಸ್ಟ್‌ ಮಾಡಿರುವ ಶಾಸಕ ವೇದವ್ಯಾಸ ಕಾಮತ್‌ ರವರು, ಮಾಜಿ ಮುಖ್ಯಮಂತ್ರಿ ಎಸ್‌ ಎಂ ಕೃಷ್ಣ ಅಳಿಯ, ಕೆಫೆ ಕಾಫಿ ಡೇ ಸ್ಥಾಪಕ ಸಿದ್ದಾರ್ಥ ವಿ.ಜಿ ಅವರು ಇತ್ತೀಚೆಗೆ ಉಳ್ಳಾಲದ ನೇತ್ರಾವತಿ ಸೇತುವೆಯ ಬಳಿ ಸಾವನ್ನಪ್ಪಿದ ಬಳಿಕ ಮುಂದಿನ ದಿನಗಳಲ್ಲಿ ಇಂತಹ ಅನಾಹುತಗಳನ್ನು ತಪ್ಪಿಸುವ ಸಲುವಾಗಿ ಸೇತುವೆಗೆ ಸಿಸಿಟಿವಿ ಅಳವಡಿಸುವ ಒಂದು ಚಿಂತನೆ ನಡೆಸಿದ್ದಾರೆ.

ಉಳ್ಳಾಲ ಸೇತುವೆಗೆ ಸಿಸಿಟಿವಿ ಅಳವಡಿಕೆಗೆ ಬಗ್ಗೆ ಜಿಲ್ಲಾಧಿಕಾರಿಯವರೊಂದಿಗೆ ಸಮಾಲೋಚನೆ ನಡೆಸುತ್ತೇನೆ ಎಂದು ಬರೆದುಕೊಂಡಿದ್ದಾರೆ.ʼʼಮಂಗಳೂರಿನಿಂದ ಉಳ್ಳಾಲಕ್ಕೆ ಹೋಗುವ ರಸ್ತೆಯಲ್ಲಿ ಪ್ರಮುಖವಾಗಿ ಸಿಗುವ ನೇತ್ರಾವತಿ ಸೇತುವೆ ಅಥವಾ ಉಳ್ಳಾಲ ಸೇತುವೆಗೆ ಸಿಸಿಟಿವಿ ಅಳವಡಿಸಲು ಚಿಂತನೆ ಮಾಡಿದ್ದು, ಈ ಬಗ್ಗೆ ಮುಂದಿನ ದಿನಗಳಲ್ಲಿ  ಜಿಲ್ಲಾಧಿಕಾರಿಯವರೊಂದಿಗೆ ಸಮಾಲೋಚಿಸುತ್ತೇನೆ. ನೇತ್ರಾವತಿ ಸೇತುವೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ಅಪಾಯಕಾರಿ ತಾಣವಾಗಿ ಪರಿಣಮಿಸುತ್ತದೆ.

Also Read  ಜು. 21ರಂದು ತೆರೆಗೆ ಬರಲಿದೆ “ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ"

ಆತ್ಮಹತ್ಯೆಯಂತಹ ಅಹಿತಕರ ಘಟನೆಗಳಿಗೆ ಇದು ಕಾರಣವಾಗುತ್ತಿದೆ. ಸಿಸಿಟಿವಿಗಳನ್ನು ಅಳವಡಿಸುವುದರಿಂದ ಸೇತುವೆಯ ಮೇಲೆ ನಡೆದ ದುರ್ಘಟನೆಗಳನ್ನು ತಕ್ಷಣ ಪರಿಶೀಲಿಸಲು ಅನುಕೂಲವಾಗುತ್ತದೆ. ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವುದರಿಂದ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಸಮಯ ಮತ್ತು ಶ್ರಮ ವ್ಯರ್ಥವಾಗುವುದಿಲ್ಲ. ಒಟ್ಟಿನಲ್ಲಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆಯಿಂದ ಪೊಲೀಸ್ ಇಲಾಖೆಗೆ ತನಿಖೆಗೆ ಸಹಕಾರಿಯಾಗುವುದನ್ನು ದೃಷ್ಟಿಯಲ್ಲಿಟ್ಟು ಈ ಬಗ್ಗೆ ಕ್ರಮ ಕೈಗೊಳ್ಳುವುಗುವುದುʼʼ ಎಂದಿದ್ದಾರೆ.

 

 

error: Content is protected !!
Scroll to Top