ಕುಲಶೇಖರದಲ್ಲಿ ನಿರ್ಮಾಣವಾಗುತ್ತಿದ್ದ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.3.ಸೆಂಟ್ರಿಂಗ್‌ ಕೆಲಸ ಮಾಡುತ್ತಿದ್ದ ಕಾರ್ಮಿಕ ಮೂಡುಪೆರಾರಿನ ಅರಿಕೆಪದವು ನಿವಾಸಿ (47) ಮಹಾಬಲ ಗೌಡ ಎಂಬವರು ಕುಲಶೇಖರ ಡೈರಿ ಸಮೀಪ ಶುಕ್ರವಾರ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಸಾವನ್ನಪ್ಪಿದ್ದಾರೆ.

ಮಧ್ಯಾಹ್ನ ವೇಳೆ ಕಟ್ಟಡದ 2ನೇ ಮಹಡಿಯಲ್ಲಿ ಸೆಂಟ್ರಿಂಗ್‌ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಅವರು ಆಯತಪ್ಪಿ 1ನೇ ಮಹಡಿಗೆ ಬಿದ್ದಿದ್ದರು. ತೀವ್ರ ಗಾಯಗೊಂಡಿದ್ದ ಅವರನ್ನು ಸ್ಥಳದಲ್ಲಿದ್ದ ಕಾರ್ಮಿಕರು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಅಷ್ಟರಲ್ಲಿಯೇ ಅವರು ಸಾವನ್ನಪ್ಪಿರುವುದಾಗಿ ಪರೀಕ್ಷಿಸಿದ ವೈದ್ಯರು ತಿಳಿಸಿದರು. ಮೃತರು ಪತ್ನಿ ಮತ್ತು ಇಬ್ಬರು ಪುತ್ರರ‌ನ್ನು ಅಗಲಿದ್ದಾರೆ.ಕಂಕನಾಡಿ ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

Also Read  ಮುಂದಿನ ಎರಡು ದಿನ ದಕ್ಷಿಣ ಕನ್ನಡ ಉಡುಪಿಯಲ್ಲಿ ಉಷ್ಣ ಅಲೆ ಎಚ್ಚರಿಕೆ

error: Content is protected !!
Scroll to Top