ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಸಮೃದ್ಧಿ ಯೋಜನೆ ➤ ಬೀದಿಬದಿ ವ್ಯಾಪಾರ ಮಹಿಳೆಯರಿಗೆ ಪ್ರೋತ್ಸಾಹ ಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.5.ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಸಮೃದ್ಧಿ ಯೋಜನೆಯಡಿ 18 ರಿಂದ 60 ವರ್ಷ ವಯೋಮಿತಿಯ ಬೀದಿಬದಿಯಲ್ಲಿ ವ್ಯಾಪಾರ ಮಾಡುತ್ತಿರುವ, ಬೀದಿ ಬದಿ ವ್ಯಾಪಾರಿಗಳಿಗೆ ಪ್ರೋತ್ಸಾಹಧನ ನೀಡಲು ನಿರ್ಧರಿಸಿದೆ.

ಗುರುತಿನ ಚೀಟಿ ಪಡೆದಿರುವ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿ ಹೊಂದಿರುವ ಮಹಿಳೆಯರಿಗೆ ರೂ 10,000 ಪ್ರೋತ್ಸಾಹಧನ ನೀಡಲು 2019-20 ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಇರುವ ಮಹಿಳೆಯರು ಅರ್ಜಿಯನ್ನು ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಪಡೆದುಕೊಂಡು ಅಗಸ್ಟ್ 10 ರೊಳಗಾಗಿ ತ್ರಿ-ಪ್ರತಿಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ಕಚೇರಿಗಳನ್ನು ಸಂಪರ್ಕಿಸಬಹುದು.

Also Read  ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಡಾ| ರಘು ನಿರಂತರ ಸೋತ ಹಿನ್ನೆಲೆ ►ಕಾಂಗ್ರೆಸ್ ಅಭ್ಯರ್ಥಿಯಾಗಿ ಶಶಿಧರ್ ಬೊಟ್ಟಡ್ಕರವರಿಗೆ ಸೀಟು ನೀಡಲು ಆಗ್ರಹ

ದೂರವಾಣಿ ಸಂಖ್ಯೆ: ಮಂಗಳೂರು ನಗರ 0824-2432809, ಮಂಗಳೂರು ಗ್ರಾಮಾಂತರ 0824-2263199, ಬಂಟ್ವಾಳ 08255-232465, ವಿಟ್ಲ 08255-238080, ಪುತ್ತೂರು 08251-230388, ಸುಳ್ಯ 08257-230239, ಬೆಳ್ತಂಗಡಿ 08256-232134 ನ್ನು ಸಂಪರ್ಕಿಸಬೇಕು ಎಂದು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top