ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ಇಲಾಖಾವತಿಯಿಂದ ➤ ಉದ್ಯೋಗಿನಿ ಯೋಜನೆ:ಮಹಿಳೆಯರಿಗೆ ಸಾಲಸೌಲಭ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.5.ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ 18 ರಿಂದ 55 ವರ್ಷ ವಯೋಮಿಯ ಮಹಿಳೆಯರಿಗೆ ಸಾಲ ಸೌಲಭ್ಯ ನೀಡುವ ಯೋಜನೆಯನ್ನು ಹಾಕಿಕೊಂಡಿದೆ.

ಹಾಗೂ ಕುಟುಂಬದ ವಾರ್ಷಿಕ ಆದಾಯ ರೂ 1.50 ಲಕ್ಷಕ್ಕೆ ಮೀರದ ಮಹಿಳೆಯರಿಂದ 2019-20ನೇ ಸಾಲಿಗೆ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ ಸಾಮಾನ್ಯ ವರ್ಗದ ಮಹಿಳೆಯರಿಗೆ ಬ್ಯಾಂಕಿನಿಂದ ಮಂಜೂರಾದ ಗರಿಷ್ಠ ಸಾಲ ರೂ 3 ಲಕ್ಷಕ್ಕೆ ಶೇಕಡ 30% ಸಹಾಯಧನ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇಕಡ 50% ಸಹಾಯಧನ ನೀಡಲಾಗುವುದು. ಉದ್ಯಮವನ್ನು ಪ್ರಾರಂಭಿಸಲು ಆಸಕ್ತಿ ಇರುವ ಮಹಿಳೆಯರು ಅರ್ಜಿಯನ್ನು ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಪಡೆದುಕೊಂಡು ಆಗಸ್ಟ್ 10 ರೊಳಗಾಗಿ ತ್ರಿ-ಪ್ರತಿಯಲ್ಲಿ ಸಲ್ಲಿಸಬೇಕು.


ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ಕಚೇರಿಗಳ ದೂರವಾಣಿ ಸಂಖ್ಯೆ: ಮಂಗಳೂರು ನಗರ 0824-2432809, ಮಂಗಳೂರು ಗ್ರಾಮಾಂತರ 0824-2263199, ಬಂಟ್ವಾಳ 08255-232465, ವಿಟ್ಲ 08255-238080, ಪುತ್ತೂರು 08251-230388, ಸುಳ್ಯ 08257-230239, ಬೆಳ್ತಂಗಡಿ 08256-232134 ನ್ನು ಸಂಪರ್ಕಿಸಬೇಕು ಎಂದು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group