ಕಡ್ಯ-ಕೊಣಾಜೆ: ರೈತ ಕ್ಷೇತ್ರ ಪಾಠಶಾಲೆ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಆಗಸ್ಟ್.5.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಿಗೆ ಕಡ್ಯ ವಾಸುದೇವ ಭಟ್‍ರವರ ಮನೆಯಲ್ಲಿ ರೈತ ಕ್ಷೇತ್ರ ಪಾಠಶಾಲೆ ಕಾರ್ಯಗಾರದಲ್ಲಿ ಹಣ್ಣು-ಹಂಪಲುಗಳ ಮಾಹಿತಿ ಕಾರ್ಯಗಾರ ಇತ್ತೀಚೆಗೆ ನಡೆಯಿತು.


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಅಧಿಕಾರಿ ಉಮೇಶ್ ರವರ ನೇತೃತ್ವದಲ್ಲಿ ನಡೆದ ರೈತ ಕ್ಷೇತ್ರ ಪಾಠಶಾಲೆ ಕಾರ್ಯಗಾರದಲ್ಲಿ, ಕಡ್ಯ ವಾಸುದೇವ ಭಟ್‍ರವರು ತಮ್ಮ ತೋಟದಲ್ಲಿ ಬೆಳೆದಿರುವ ಹಲವು ಬಗೆಯ ಹಣ್ಣುಗಳನ್ನು ಬೆಳೆಸುವ ಹಾಗೂ ಅವುಗಳ ಬೆಳವಣಿಗೆಯ ಕುರಿತು ಹಾಗೂ ವೀಣಾ ಭಟ್‍ರವರು ಹಣ್ಣು-ಹಂಪಲುಗಳನ್ನು ಸೂಕ್ತ ರೀತಿಯಲ್ಲಿ ಸಂರಕ್ಷಿಸಿಡುವ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಯೋಜನಾಧಿಕಾರಿ ಧರ್ಣಪ್ಪ ಮೂಲ್ಯ, ಕಡ್ಯ-ಕೊಣಾಜೆ ಒಕ್ಕೂಟಗಳ ಉಪಾಧ್ಯಕ್ಷ ತಿಮ್ಮಪ್ಪ, ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ರಘುಚಂದ್ರ ಕೆ., ರೆಂಜಿಲಾಡಿ ಸೇವಾಪ್ರತಿನಿಧಿ ಯಶವಂತ್ ಸೇರಿದಂತೆ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು. ಕಡ್ಯ ಕೊಣಾಜೆ ಒಕ್ಕೂಟದ ಅಧ್ಯಕ್ಷ ಪುಂಡರಿಕ್ಷಾ ಸ್ವಾಗತಿಸಿ, ಸೇವಾಪ್ರತಿನಿಧಿ ಗೋಪಿ ಕೆ. ವಂದಿಸಿದರು.

Also Read  ಬಿಗ್ ಬಾಸ್ ವಿನ್ನರ್ ರೂಪೇಶ್ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ

error: Content is protected !!
Scroll to Top