ಕರಾವಳಿಯ ಹಲವೆಡೆ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ➤ ಇಂದು (ಆ.06) ಕಡಬ, ಪುತ್ತೂರು, ಬೆಳ್ತಂಗಡಿ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ.06. ಕರಾವಳಿ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಇಂದು (ಮಂಗಳವಾರ) ಪುತ್ತೂರು, ಕಡಬ ಹಾಗೂ ಬೆಳ್ತಂಗಡಿ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ನೀಡಿ ಪುತ್ತೂರು ಸಹಾಯಕ ಆಯುಕ್ತರು ಪ್ರಕಟಣೆ ಹೊರಡಿಸಿದ್ದಾರೆ.

ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದ್ದು, ಪದವಿ ಮತ್ತು ನಂತರದ ತರಗತಿಗಳು ಎಂದಿನಂತೆ ನಡೆಯಲಿವೆ ಎಂದು ಪುತ್ತೂರು ಸಹಾಯಕ ಆಯುಕ್ತರಾದ ಎಚ್. ಕೆ. ಕೃಷ್ಣಮೂರ್ತಿ ತಿಳಿಸಿದ್ದಾರೆ.‌

Also Read  ಬೆಳ್ತಂಗಡಿ: ಅಕ್ರಮ ಮರಳುಗಾರಿಕೆ ಅಡ್ಡೆಗೆ ಲೋಕಾಯುಕ್ತ ದಾಳಿ

 

error: Content is protected !!
Scroll to Top