ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆ : ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿತ ➤ ಸಂಚಾರ ಸ್ಥಗಿತ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆಗಸ್ಟ್.6. ಕರಾವಳಿ ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಇದರ ಪರಿಣಾಮವಾಗಿ ಚಾರ್ಮಾಡಿ ಘಾಟಿಯಲ್ಲಿ ಮೂರು ಕಡೆ ಗುಡ್ಡ ಕುಸಿತ ಸಂಭವಿಸಿದೆ.

ಘಾಟ್ ನ ತಿರುವಿನಲ್ಲಿ ರಸ್ತೆಗೆ ಬೃಹತ್ ಮರವೊಂದು ಉರುಳಿ ಬಿದ್ದು, ಸಂಚಾರಕ್ಕೆ ತೊಡಕಾಗಿದ್ದು, ಮರ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಹಾಗೂ ಘಾಟಿಯ ಮಧ್ಯೆ ಭಾಗದಲ್ಲಿ ಗುಡ್ಡ ಕುಸಿತವಾಗಿದ್ದು, ಇದಾರಿಂದಾಗಿ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಗಿದೆ. ಗುಡ್ಡ ಕುಸಿತದ ಸ್ಥಳದಲ್ಲಿ ಏಕಮುಖ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಟ್ರಾಫಿಕ್‌ ಜಾಮ್‌ ಉಂಟಾಗಿದ್ದು ವಾಹನ ಸಂಚಾರ ಅಸ್ತವ್ಯಸ್ಥವಾಗಿದೆ.ಮರ ಬಿದ್ದು ಒಂದು ಗಂಟೆಯಾದರೂ ಯಾವುದೇ ಅಧಿಕಾರಿಗಳು ಸ್ಥಳಕ್ಕೆ ಬಾರದ ಹಿನ್ನಲೆಯಲ್ಲಿ ಅಧಿಕಾರಿಗಳ ವಿರುದ್ಧ ವಾಹನ ಸವಾರರ ಆಕ್ರೋಶ ವ್ಯಕ್ತಪಡಿಸಿದರು.ಸ್ಥಳೀಯರು, ವಾಹನ ಸವಾರರು ಸೇರಿಕೊಂಡು ರಸ್ತೆಗೆ ಬಿದ್ದ ಮರವನ್ನು ತೆರವು ಕಾರ್ಯ ನಡೆಸಿದರು.

Also Read  ಮಂಗಳೂರು: ಕರಾವಳಿಗೆ ಕಾಲಿಟ್ಟ ಹಿಂಗಾರು ಮಳೆ ► ಬಂದರ್ ನಲ್ಲಿ ಚಂಡಮಾರುತದ ಬಗ್ಗೆ ಮೈಕ್ ಮೂಲಕ ಎಚ್ಚರಿಕೆ..!!

 

 

error: Content is protected !!
Scroll to Top