(ನ್ಯೂಸ್ ಕಡಬ) newskadaba.com ಮಂಗಳೂರು, ಆ.06. ಕರಾವಳಿಯಾದ್ಯಂತ ಭಾರೀ ಮಳೆ ಆಗುವ ಸಾಧ್ಯತೆ ಇರುವುದರಿಂದ ಆಗಸ್ಟ್ 7 ಬುಧವಾರದಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲೆಯಲ್ಲಿ ಆಗಸ್ಟ್ 07 ಮತ್ತು 08 ರಂದು ರೆಡ್ ಅಲೆರ್ಟ್ ಘೋಷಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶಿಸಿದ್ದಾರೆ.