(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.7.ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಬೆಳ್ಳಾರೆಯಿಂದ ಪೆರುವಾಜೆ-ಕುಂಡಡ್ಕ -ನಾಡೋಳಿ-ಸಾರಕರೆ-ಸರ್ವೆ-ಮೂಲಕ ವೀರಮಂಗಲ ಮೂಲಕ ಕುಮಾರಧಾರ ತಲುಪುವ ಗೌರಿ ಹೊಳೆ ತನ್ನ ಹರಿವು ಹೆಚ್ಚಿಸಿಕೊಂಡಿದೆ.
ಕಡಬ ತಾಲೂಕಿನ ಪಾಲ್ತಾಡಿ ಗ್ರಾಮ ಹಾಗೂ ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮವನ್ನು ಜೋಡಿಸುವಲ್ಲಿ ಗೌರಿಹೊಳೆಗೆ ಅಡ್ಡಲಾಗಿರುವ ಕುಂಡಡ್ಕ ಕಿರು ಸೇತುವೆಯಲ್ಲಿ ನೀರು ಅಪಾಯಕಾರಿ ಮಟ್ಟದಲ್ಲಿ ಇದೆ. ಸೇತುವೆ ತೀರಾ ಶಿಥಿಲಾವಸ್ಥೆಗೆ ತಲುಪಿ ಕುಸಿಯುವ ಹಂತಕ್ಕೆ ಬಂದಿರುವ ಸೇತುವೆಯೂ ಕೊಚ್ಚಿಹೋಗುವ ಭೀತಿಯನ್ನು ಜನತೆ ಎದುರಿಸುತ್ತಿದ್ದಾರೆ. ಈ ಸೇತುವೆ ಕುಸಿದು ಸಂಪರ್ಕ ಕಡಿತವಾದರೆ ಪಾಲ್ತಾಡಿ ಭಾಗದಿಂದ ಸವಣೂರು ,ಕಾಣಿಯೂರು ,ಪೆರುವಾಜೆಗೆ ಹೋಗಲು ಪುತ್ತೂರು ಅಥವಾ ಬೆಳ್ಳಾರೆ ಮೂಲಕ ಸುತ್ತಿ ಬಳಸಿ ಹೋಗಬೇಕಾದ ಪರಿಸ್ಥಿತಿ ಬರಲಿದೆ. ಗೌರಿ ಹೊಳೆಯ ಚೆನ್ನಾವರ ಎಂಬಲ್ಲಿ ಹೊಸದಾಗಿ ಕಟ್ಟಿರುವ ಕಿಂಡಿ ಅಣೆಕಟ್ಟದಲ್ಲಿ ದೊಡ್ಡ ದೊಡ್ಡ ಮರಗಳು ಸಿಲುಕಿಕೊಂಡು .ಕಿಂಡಿ ಅಣೆಕಟ್ಟವೂ ಮುಳುಗಡೆಯಾಗಿದೆ.