ಶಿರಾಡಿ: ರಸ್ತೆಗುರುಳಿದ ಬೃಹತ್ ಮರ ➤ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ.07. ಕರಾವಳಿಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಗೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಬಳಿಯ ಕೊಡ್ಯಕಲ್ ಎಂಬಲ್ಲಿ ಮರ ಬಿದ್ದು ರಸ್ತೆ ತಡೆ ಉಂಟಾದ ಘಟನೆ ಬುಧವಾರದಂದು ನಡೆದಿದೆ.

ರಸ್ತೆ ಬದಿಯಲ್ಲಿದ್ದ ಬೃಹತ್ ಮರ ಬಿದ್ದು ರಾಷ್ಟ್ರೀಯ ಹೆದ್ದಾರಿ ಬ್ಲಾಕ್ ಆಗಿದ್ದು, ಮರ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ ನೇತೃತ್ವದಲ್ಲಿ ಸಾರ್ವಜನಿಕರು ತೆರವು ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ.

Scroll to Top