ಸಚಿವ ಸಂಪುಟ ವಿಸ್ತರಣೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ/ಬೆಂಗಳೂರು, ಆಗಸ್ಟ್.7.ಬಿಎಸ್ ಯಡಿಯೂರಪ್ಪ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹೈಕಮಾಂಡ್ ಮುಖಂಡರನ್ನು ಭೇಟಿಯಾಗಿ, ಸಚಿವ ಸಂಪುಟ ರಚನೆ ಕುರಿತು ಚರ್ಚಿಸಿದ್ದರು.

ಆದರೆ ರಾಜ್ಯದಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೂಡಲೇ ಪ್ರವಾಹ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡುವಂತೆ ಹೈಕಮಾಂಡ್ ಸೂಚಿಸಿದೆ ಎಂದು ವರದಿ ತಿಳಿಸಿದೆ. ಹಿನ್ನೆಲೆಯಲ್ಲಿ ಸಚಿವ ಸಂಪುಟ ರಚನೆ ಮುಂದೂಡಿಕೆಯಾಗಿದ್ದು, 2 ದಿನಗಳ ಬಳಿಕ ದೆಹಲಿಗೆ ವಾಪಸ್ ಬನ್ನಿ ಎಂದು ಬಿಜೆಪಿ ಹೈಕಮಾಂಡ್ ಬಿಎಸ್ ವೈಗೆ ಸೂಚನೆ ನೀಡಿದೆ.ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಬಿಎಸ್ ಯಡಿಯೂರಪ್ಪ ದೆಹಲಿ ಕಾರ್ಯಕ್ರಮ ರದ್ದು ಮಾಡಿ ತುರ್ತಾಗಿ ಬೆಂಗಳೂರಿನತ್ತ ಹೊರಟಿದ್ದಾರೆ. ಮಧ್ಯಾಹ್ನ ಬೆಂಗಳೂರು ತಲುಪಲಿದ್ದು, ಬಳಿಕ ಮಳೆ, ಪ್ರವಾಹ ಸಂಬಂಧಿತ ವಿಷಯದ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Also Read  ಅರಣ್ಯ ಮತ್ತು ತೋಟಗಾರಿಕಾ ಘಟಕ ಮಂಗಳೂರು ಕಚೇರಿ ➤ ವಾಹನ ಹೊರಗುತ್ತಿಗೆ: ಟೆಂಡರ್ ಆಹ್ವಾನ

error: Content is protected !!
Scroll to Top