ನೀರು ತುಂಬಿಸಿಟ್ಟಿದ್ದ ಬಕೆಟ್ ಗೆ ಬಿದ್ದು ಒಂದೂವರೆ ವರ್ಷದ ಮಗು ಮೃತ್ಯು ➤ ಮಂಗಳೂರಿನಲ್ಲಿ ನಡೆದ ಘಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.07. ಆಟವಾಡುತ್ತಿದ್ದ ಮಗುವೊಂದು ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮೃತಪಟ್ಟ ಘಟನೆ ನಗರದ ಹೊರವಲಯದ ಕುಳಾಯಿ ಎಂಬಲ್ಲಿ ಬುಧವಾರದಂದು ನಡೆದಿದೆ.

ಮೃತ ಮಗುವನ್ನು ಕುಳಾಯಿ ನಿವಾಸಿ ಶಂಕರಪ್ಪ ಎಂಬವರ ಒಂದೂವರೆ ವರ್ಷ ಪ್ರಾಯದ ಪುತ್ರ ಸಿದ್ಧಾರ್ಥ್ ಎಂದು ಗುರುತಿಸಲಾಗಿದೆ. ಸಿದ್ಧಾರ್ಥ್ ತನ್ನ ಅಕ್ಕನ ಜೊತೆ ಮನೆಯಲ್ಲಿ ಆಟವಾಡುತ್ತಿದ್ದಾಗ ನೀರು ತುಂಬಿಸಿಟ್ಟಿದ್ದ ಬಕೆಟ್ ಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಸ್ಥಳಕ್ಕೆ ಸುರತ್ಕಲ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಸುಳ್ಯ: ಮಂಡೆಕೋಲು ಸಹಕಾರಿ ಸಂಘಕ್ಕೆ ಸ್ಕ್ಯಾಡ್ಸ್ ಪ್ರಶಸ್ತಿ

error: Content is protected !!
Scroll to Top