ಕೊಳ್ನಾಡು ಗ್ರಾಮ ಪಂಚಾಯತಿನಲ್ಲಿ ಸ್ವಾತಂತ್ಯೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ವಿಟ್ಲ, ಆ.15. ಕೊಳ್ನಾಡು ಗ್ರಾಮ ಪಂಚಾಯತಿ ವತಿಯಿಂದ ಕೊಳ್ನಾಡು ಗ್ರಾಮ ಪಂಚಾಯತಿ ಕಾರ್ಯಾಲಯ ಹಾಗೂ ಸಾಲೆತ್ತೂರು ಮೈದಾನದ ರಾಜೀವ ಗಾಂಧೀ ಸೇವಾ ಕೇಂದ್ರದ, ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕೊಳ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರು ಧ್ವಜಾರೋಹಣ ನೇರವೇರಿಸಿ ಪ್ರಾಸ್ತಾವಿಕ ಮಾತನಾಡಿದರು. ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ಯಮುನಾ ಲಕ್ಷ್ಮಣ ಗೌಡ, ಪಂಚಾಯತ್ ಸದಸ್ಯರು, ಅಂಗನವಾಡಿ ಕಾರ್ಯಕರ್ತರು ಮತ್ತು ಮಕ್ಕಳು, ಸಮಾಜ ಸೇವಕ ಅಶ್ರಪ್ ಸಾಲೆತ್ತೂರು, ಗುತ್ತಿಗೆದಾರ ಅಂದ್ರು, ಸಾಮಾಜಿಕ ಕಾರ್ಯಕರ್ತ ಎಚ್.ಎಂ. ಖಾಲೀದ್ ಕರೈ ಕೊಳ್ನಾಡು, ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಪಂಚಾಯತ್ ಅಧ್ಯಕ್ಷರಿಂದ ಸರ್ಕಾರದ ಅದೇಶದಂತೆ ಸಾರ್ವಜನಿಕರಿಗೆ ಸ್ವಚ್ಚತಾ ಪ್ರತಿಜ್ಞಾ ವಿಧಿ ಭೋದಿಸಲಾಯಿತು. ಪಂಚಾಯತ್ ಕಾರ್ಯದರ್ಶಿ ಕಾರ್ಯಕ್ರಮ ನಿರೂಪಿಸಿದರು.
Scroll to Top