ಶಾಲಾ-ಕಾಲೇಜು‌ ರಜೆಯ ಬಗ್ಗೆ ಸುಳ್ಳು ಸುದ್ದಿ ಹರಡುವವರ ವಿರುದ್ದ ಕಾನೂನು ಕ್ರಮ ➤ ವಾರ್ತಾಧಿಕಾರಿ ಖಾದರ್ ಷಾ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.08. ದಕ್ಷಿ‌ಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ (ಆಗಸ್ಟ್ 9) ಶಾಲಾ – ಕಾಲೇಜುಗಳಿಗೆ ರಜೆ‌ ಘೋಷಿಸಲಾಗಿದೆ ಎಂಬ ಸುಳ್ಳು ಸುದ್ದಿಯನ್ನು ಸಾಮಾಜಿಕ ತಾಣಗಳಲ್ಲಿ ಕಿಡಿಗೇಡಿಗಳು ಹರಡುತ್ತಿದ್ದಾರೆ.

ಈ ಬಗ್ಗೆ ಜಿಲ್ಲಾಧಿಕಾರಿಯವರ ಹಿಂದಿನ ಆದೇಶ ಪ್ರತಿಗಳನ್ನು ತಿದ್ದಿ ಹರಿಯಬಿಡಲಾಗಿದ್ದು, ಇಂತಹ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮವನ್ನು ಜರುಗಿಸಲು ಪೊಲೀಸ್ ಅಧಿಕಾರಿಗಳಿಗೆ ಕೋರಲಾಗಿದೆ. ರಜೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಯವರ ಆದೇಶಗಳಿದ್ದಲ್ಲಿ ವಾರ್ತಾ ಇಲಾಖೆ‌ಯ ಮುಖಾಂತರ ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ತಿಳಿಸಲಾಗುವುದು. ಈ ಬಗ್ಗೆ‌ ಸಾರ್ವಜನಿಕರು ಗೊಂದಲಕ್ಕೊಳಗಾಗುವ ಅಗತ್ಯವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್‌ ಷಾ ತಿಳಿಸಿದ್ದಾರೆ.

Also Read  ಕಡಬ: ಪೆರಾಬೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ➤ ಆರೋಪಿಗಳಿಗೆ ಷರತ್ತುಬದ್ದ ನಿರೀಕ್ಷಣಾ ಜಾಮೀನು ಮಂಜೂರು

error: Content is protected !!
Scroll to Top