ಪಿಂಚಣಿದಾರರ ಅಹವಾಲು ➤ ಶೀಘ್ರದಲ್ಲಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.9.ಪಿಂಚಣಿದಾರರ ವಿವಿಧ ಅಹವಾಲುಗಳಿಗೆ ಪರಿಹಾರ ಒದಗಿಸಲು ಶೀಘ್ರವೇ ಬ್ಯಾಂಕುಗಳು ಹಾಗೂ ಸಂಬಂಧಪಟ್ಟ ಇಲಾಖಾಧಿಕಾರಿಗಳ ಸಭೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದರು.


ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಕೋರ್ಟ್ ಹಾಲ್‍ನಲ್ಲಿ ಪಿಂಣಿಣಿ ಅದಾಲತ್ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತಾನಾಡಿದರು. ಇವರು ಸಾರ್ವಜನಿಕರ ಹಿತಾಸಕ್ತಿಗಾಗಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳ ಕುಂದು ಕೊರತೆ, ವಿಚಾರ ವಿನಿಮಯ ಹಾಗೂ ಅವರ ಸಮಸ್ಯೆಗಳ ನಿವಾರಣೆಗೆ ನಡೆಯುವ ಪೆನ್ಷನ್ ಅದಾಲತ್ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ಪಿಂಚಣಿ ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ ನಿರ್ದೇಶನಾಲಯವು ಪ್ರಥಮ ಬಾರಿಗೆ ಪಿಂಚಣಿ ಅದಾಲತ್ ಕಾರ್ಯಕ್ರಮವನ್ನು ಏರ್ಪಡಿಸುದ್ದು, ಇದರ ಮುಂದಿನ ಕ್ರಮವಾಗಿ ಎಲ್ಲಾ ಇಲಾಖಾಧಿಕಾರಿಗಳು ಹಾಜರಿದ್ದು ಸುಧೀರ್ಘ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.ಕಾರ್ಯಕ್ರಮದಲ್ಲಿ ಪಿಂಚಣಿ ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ ಇಲಾಖೆ ಸಹಾಯಕ ನಿರ್ದೇಶಕರಾದ ಬೇಬಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥತರಿದ್ದರು.

Also Read  ಅಡುಗೆ ಭಟ್ಟರಿಗೆ ಕೊರೊನಾ ದೃಢ ➤ ಬೆಳಿಗ್ಗೆ ಮದುವೆಯಾದ ನವಜೋಡಿ ಸಂಜೆ ವೇಳೆ ಕ್ವಾರಂಟೈನ್ ನಲ್ಲಿ ಲಾಕ್

error: Content is protected !!
Scroll to Top