ಕರಾವಳಿಯಲ್ಲಿ ಮುಂದುವರಿದ ಮಳೆ ➤ ಶನಿವಾರ ದಕ್ಷಿಣ ಕನ್ನಡದ ಎಲ್ಲಾ ಶಾಲಾ ಕಾಲೇಜುಗಳಿಗೆ ಮತ್ತೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.09. ಕರಾವಳಿಯಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ (ಪದವಿ ತರಗತಿವರೆಗೆ) ಶನಿವಾರದಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.

ಕರಾವಳಿ ಸೇರಿದಂತೆ ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು, ಕಡಬ ತಾಲೂಕುಗಳಲ್ಲಿ ಕಳೆದ ಕೆಲವು ದಿನಗಳಿಂದ ಅತೀ ಹೆಚ್ಚಿನ ಮಳೆ ದಾಖಲಾಗಿದೆ. ಜಿಲ್ಲೆಯ ಹೆಚ್ಚಿನ ನದಿಗಳು ತುಂಬಿ ಹರಿಯುತ್ತಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯಾವುದೇ ಅನಾಹುತಗಳಿಗೆ ಅವಕಾಶ ನೀಡದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಕ್ರಮ ಕೈಗೊಂಡಿರುವುದಾಗಿ ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

Also Read  ರಾಜ್ಯದಲ್ಲಿ ಇಂದು 9 ಮಂದಿಗೆ ಕೊರೋನ ಸೋಂಕು ಪತ್ತೆ: 532ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ

ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿರಬೇಕು. ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಪ್ರವಾಸಿಗರು/ಸಾರ್ವಜನಿಕರು ನದಿ ತೀರಕ್ಕೆ, ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ವಹಿಸಬೇಕು. ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿನ ತುರ್ತು ಸೇವೆ (1077)ಗೆ ದಿನದ 24 ಗಂಟೆಯೂ ಕರೆ ಮಾಡಬಹುದು ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶದಲ್ಲಿ ಸೂಚನೆ ನೀಡಿದ್ದಾರೆ.

Also Read  ಕೋವಿಡ್ ಕೇರ್ ಕೇಂದ್ರಗಳಲ್ಲಿ ತುರ್ತು ನಿಗಾ ಘಟಕ ಸ್ಥಾಪನೆ ➤ ಸರಕಾರದ ಮಹತ್ವದ ತೀರ್ಮಾನ

error: Content is protected !!
Scroll to Top