(ನ್ಯೂಸ್ ಕಡಬ) newskadaba.com ಮಂಗಳೂರು, ಆ.10. ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡದಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮುಂದಿನ 48 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ.
ಜಿಲ್ಲೆಯಲ್ಲಿ 150ರಿಂದ 260 ಮಿ.ಮೀ. ಮಳೆಯಾಗುವ ಸಾಧ್ಯತೆಯಿದ್ದು, ಅರಬ್ಬೀ ಸಮುದ್ರದಲ್ಲಿ 3.2 ರಿಂದ 3.9 ಮೀಟರ್‌ಗಳಷ್ಟು ಎತ್ತರವಾಗಿದೆ. ಚಾರ್ಮಾಡಿ ಘಾಟ್ ಹಾಗೂ ಶಿರಾಡಿ ಘಾಟ್ ರಸ್ತೆಗಳು ಸಂಪೂರ್ಣವಾಗಿ ಮುಚ್ಚಲ್ಪಟ್ಟಿವೆ. ಸಂಪಾಜೆ ಘಾಟ್ ತೆರೆದಿದ್ದು, ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂದಿನ 48 ಗಂಟೆಗಳ ಕಾಲ ಜಿಲ್ಲೆಯಾದ್ಯಂತ ರೆಡ್ ಅಲೆರ್ಟ್ ಘೋಷಿಸಲಾಗಿದ್ದು, ಸಾರ್ವಜನಿಕರು ಎಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.