ಇಂದು (ಆ.11) ಕಡಬದಲ್ಲಿ ಜೇಸಿಐ ವತಿಯಿಂದ ‘ಉಚಿತ ವೈದ್ಯಕೀಯ ತಪಾಸಣಾ ಶಿಬಿರ’ ➤ ಜಿಲ್ಲೆಯ ವಿವಿಧ ವಿಭಾಗಗಳ ಎಂಟು ತಜ್ಞ ವೈದ್ಯರು ಭಾಗಿ ➤ ಕಡಬ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಅಡಿಗ ಟಿವಿಎಸ್ ಸಹಯೋಗ

(ನ್ಯೂಸ್ ಕಡಬ) newskadaba.com ಕಡಬ, ಆ.11. ಜೇಸಿಐ ಕಡಬ ಕದಂಬ, ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ಸಮುದಾಯ ಆರೋಗ್ಯ ಕೇಂದ್ರ ಕಡಬ ಹಾಗೂ ಅಡಿಗ ಮೋಟಾರ್ಸ್ ಸಹಯೋಗದೊಂದಿಗೆ ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ತಜ್ಞ ವೈದ್ಯರನ್ನು ಒಳಗೊಂಡ ‘ಉಚಿತ ವೈದ್ಯಕೀಯ ತಪಾಸಣಾ ಶಿಬಿರ’ವು ಇಂದು (ಭಾನುವಾರ) ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯಲಿದೆ.

ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1.00 ಗಂಟೆಯವರೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕಿವಿ, ಮೂಗು, ಗಂಟಲಿನ ತಜ್ಞರು, ಚರ್ಮರೋಗ ತಜ್ಞರು, ಜನರಲ್ ಮೆಡಿಸಿನ್, ಪ್ರಸೂತಿ ತಜ್ಞರು, ಮಕ್ಕಳ ತಜ್ಞರು ಹಾಗೂ ಲ್ಯಾಪ್ರೊಸ್ಕೋಪಿಕ್ ತಜ್ಞರು ಭಾಗವಹಿಸಲಿದ್ದು, ಸಾರ್ವಜನಿಕರು ಶಿಬಿರದ ಪ್ರಯೋಜನವನ್ನು ಪಡೆಯುವಂತೆ ಸಂಘಟಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಭಾರತೀಯ ಅಂಚೆ ಇಲಾಖೆ ➤ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

error: Content is protected !!
Scroll to Top