ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಪಲ್ಟಿ ➤ ಏಳು ಜನರ ದುರ್ಮರಣ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆಗಸ್ಟ್.13.ವೇಗವಾಗಿ ಇಂದು ಮುಂಜಾನೆ ಉತ್ತರ ಪ್ರದೇಶದ ಬದೌನ್‌ ಎಂಬಲ್ಲಿ ಚಲಿಸುತ್ತಿದ್ದ ಟ್ರಕ್‌ ಪಲ್ಟಿಯಾಗಿ ಕನಿಷ್ಠ ಏಳು ಜನರು ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ನಡೆದಿದೆ.

ಗೋಧಿ ಚೀಲಗಳನ್ನು ತುಂಬಿಕೊಂಡು ಬದೌನ್‌ನಿಂದ ವೇಗವಾಗಿ ಬರುತ್ತಿದ್ದ ಟ್ರಕ್‌ ತಿರುವಿನಲ್ಲಿ ತಿರುವು ಮಾಡುವ ವೇಳೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸಣ್ಣ ಚಹಾ ಅಂಗಡಿಯೊಂದರ ಮೇಲೆ ಬಿದ್ದಿದೆ. ಈ ವೇಳೆ ಚಹಾದಂಗಡಿಯ ಬಳಿಯಲ್ಲಿ ನಿಂತಿದ್ದ ಕನ್ವರಿಯಾಸ್ ಸೇರಿದಂತೆ ಕೆಲವು ಜನರು ಕೂಡ ಸಿಲುಕಿದ್ದಾರೆ ಎನ್ನಲಾಗಿದೆ. ಪ್ರತ್ಯಕ್ಷ ದರ್ಶಿಗಳು ಹೇಳುವಂತೆ, . ಅತಿ ವೇಗದಿಂದ ವಾಹನ ಚಲಾಯಿಸಿದ್ದಕ್ಕೆ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿಸಿದ್ದಾರೆ.ಟ್ರಕ್‌ ಚಾಲಕನ ಅಜಾಗರೂಕತೆಯೇ ಘಟನೆಗೆ ಕಾರಣ ಎನ್ನಲಾಗಿದೆ. ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್‌ ಪರವಾಗಿ ಆಸ್ಪತ್ರೆಗೆ ಆಗಮಿಸಿದ್ದ ಸ್ಥಳಿಯ ಶಾಸಕ ರಾಜೀವ್‌ ಕುಮಾರ್‌ ಸಿಂಗ್‌, ಗಾಯಾಳುಗಳಿಗೆ ಉಚಿತ ಚಿಕಿತ್ಸೆ, ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

Also Read  ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ಟೋಲ್ ದರ ಹೆಚ್ಚಳ ➤ ಸಮರ್ಥಿಸಿಕೊಂಡ ಸಂಸದ ಪ್ರತಾಪ್ ಸಿಂಹ

error: Content is protected !!
Scroll to Top