ಭಾರತ ಸಂವಿಧಾನ ಅನುಚ್ಛೇಧ 275(1)ರಡಿ & ವಿಶೇಷ ಕೇಂದ್ರೀಯ ನೆರವಿನಡಿಯಲ್ಲಿ ➤ ಪ.ಪಂಗಡ ವಿವಿಧ ಸೌಲಭ್ಯ ಪಡೆಯಲು ಅರ್ಜಿಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.15.2018-19ನೇ ಸಾಲಿನಲ್ಲಿ ಭಾರತ ಸಂವಿಧಾನ ಅನುಚ್ಛೇಧ 275(1)ರಡಿ ಹಾಗೂ ವಿಶೇಷ ಕೇಂದ್ರೀಯ ನೆರವಿನಡಿ ಪರಿಶಿಷ್ಟ ಪಂಗಡದವರ ಅಭಿವೃದ್ಧಿ ಕಾರ್ಯಕ್ರಮಗಳಡಿ ವಿವಿಧ ಸೌಲಭ್ಯಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.


ಅರ್ಜಿದಾರರು ಕರ್ನಾಟಕದವರಾಗಿದ್ದು, ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಹೈನುಗಾರಿಕೆ, ಹಸು/ಎಮ್ಮೆ ಕರು ಘಟಕ, ಕುರಿ/ಮೇಕೆ ಘಟಕ, ಹಂದಿ ಸಾಕಾಣಿಕೆ ಸೌಲಭ ಪಡೆಯುವ ಅರ್ಜಿದಾರ ವಯಸ್ಸು 18 ರಿಂದ 60 ವರ್ಷದೊಳಗಿರಬೇಕು. ಅರ್ಜಿದಾರರ ವಾರ್ಷಿಕ ಆದಾಯ ರೂ.1.50ಲಕ್ಷಗಳ ಒಳಗಡೆ ಇರಬೇಕು. ಅರ್ಜಿದಾರರು ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರು ಸರ್ಕಾರಿ ನೌಕರಿಯಲ್ಲಿರಬಾರದು.

ಅರ್ಜಿದಾರರು ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರು ಯಾವುದೇ ಯೋಜನೆಯಡಿ ಈ ಹಿಂದೆ ಯಾವುದೇ ಇಲಾಖೆ/ನಿಗಮದಿಂದ ಯಾವುದೇ ಯೋಜನೆಯಡಿ ಸೌಲಭ್ಯವನ್ನು ಪಡೆದಿರಬಾರದು, ಪಡೆದ ಘಟಕ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವ ಬಗ್ಗೆ ಪ್ರಮಾಣ ಪತ್ರ ನೀಡಬೇಕು. ಅರ್ಜಿದಾರರು ಬಿಪಿಎಲ್ ಮತ್ತು ಆಧಾರ್ ಕಾರ್ಡ್ ಹೊಂದಿರಬೇಕು. ಹೈನುಗಾರಿಕೆ ಮತ್ತು ಕುರಿ, ಮೇಕೆ ಘಟಕಗಳನ್ನು ಮಹಿಳೆಯವರಿಗೆ ಮಾತ್ರ ನೀಡಲಾಗುವುದು. ಸರಕು ಸಾಗಾಣಿಕೆ ವಾಹನ ಪಡೆಯುವ ಅರ್ಜಿದಾರರ ವಯಸ್ಸು 18 ರಿಂದ 45 ವರ್ಷದೊಳಗಿರಬೇಕು. ಸರಕು ಸಾಗಾಣಿಕೆ ವಾಹನ ಪಡೆಯುವ ಅರ್ಜಿದಾರರು ಡ್ರೈವಿಂಗ್ ಲೈಸೆನ್ಸ್(ಲಘು/ಭಾರಿ)ಹೊಂದಿರಬೇಕು.

Also Read  ಮೇಲ್ಸೇತುವೆಯಿಂದ ಸ್ಕೂಟರ್ ಎಸೆತ       ಆರೋಪಿಗಳ ವಿರುದ್ಧ ಪ್ರಕರಣ ದಾಖಲು..!       

ಟೂರಿಸ್ಟ್ ಟ್ಯಾಕ್ಸಿಗೆ ಮಾತ್ರ ಬ್ಯಾಡ್ಜ್ ಹೊಂದಿರಬೇಕು. ಸರಕು ಸಾಗಾಣಿಕೆ ವಾಹನ ಪಡೆಯುವ ಅರ್ಜಿದಾರರ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶವಾದಲ್ಲಿ ರೂ.1.50ಲಕ್ಷ ಹಾಗೂ ನಗರ ಪ್ರದೇಶವಾದಲ್ಲಿ ರೂ.2ಲಕ್ಷ ಮಿತಿಯೊಳಗಿರಬೇಕು. ಫಲಾನುಭವಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಸಂಬಂಧಪಟ್ಟ ಬಂಟ್ವಾಳ ತಾಲೂಕಿನ ಸಹಾಯಕ ನಿರ್ದೇಶಕರು(ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ, ಗಣೇಶ್ ಬಿಲ್ಡಿಂಗ್, 2ನೇ ಮಹಡಿ, ಬಿ.ಸಿ. ರಸ್ತೆ, ಬಂಟ್ವಾಳ ತಾಲೂಕು ಇವರಿಗೆ ಸೂಕ್ತ ದಾಖಲೆಗಳೊಂದಿಗೆ ಆಗಸ್ಟ್ 26ರಂದು ಸಂಜೆ 5.30ರೊಳಗೆ ಸಲ್ಲಿಸಬೇಕು ಎಂದು ಬಂಟ್ವಾಳ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು(ಗ್ರೇಡ್-2) ಇವರ ಪ್ರಕಟಣೆ ತಿಳಿಸಿದೆ.

Also Read  ಐದರ ಬಾಲಕ ಮಕ್ಕಳ ಕಾನ್‌ಸ್ಟೇಬಲ್ ಆಗಿ ನೇಮಕ

error: Content is protected !!
Scroll to Top