ಶಕ್ತಿ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯೋತ್ಸವ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.15.ಶಕ್ತಿನಗರದ ಶ್ರೀ ಗೋಪಾಲಕೃಷ್ಣ ಪ್ರಿ-ಸ್ಕೂಲ್, ಶಕ್ತಿ ವಸತಿ ಶಾಲೆ ಹಾಗೂ ಶಕ್ತಿ ಪಿ.ಯು ಕಾಲೇಜಿನಲ್ಲಿ ಜಂಟಿಯಾಗಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಿದರು.

ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀ ಕೆ.ಸಿ ನಾೈಕ್ ಧ್ವಜಾರೋಹಣಗೈದು ದೇಶಕ್ಕಾಗಿ ಪ್ರತಿಯೊಬ್ಬರೂ ತ್ಯಾಗ ಮಾಡಲು ಸಿದ್ಧರಿರಬೇಕು ಎಂದು ಕರೆಯಿತ್ತರು. ಶಾಲಾ ಪ್ರಾಚಾರ್ಯರಾಗಿರುವ ವಿದ್ಯಾ ಕಾಮತ್ ಜಿ ಸ್ವಾಗತಿಸಿದರು.ವಿದ್ಯಾರ್ಥಿಗಳ ಪರವಾಗಿ ಪ್ರದ್ಯುಷ್ ಹಾಗೂ ಮಾನಸ, ಭಾರತದ ಸ್ವಾತಂತ್ರ್ಯದ ಇತಿಹಾಸದ ಕುರಿತಾಗಿ ಮಾತನಾಡಿದರು. ಕಾಲೇಜಿನ ಪ್ರಾಚಾರ್ಯ ಪ್ರಭಾಕರ ಜಿ.ಎಸ್ ಸ್ವಾತಂತ್ರ್ಯದ ಹಿನ್ನೆಲೆ ಹಾಗೂ ಮಹತ್ವದ ಬಗ್ಗೆ ತಿಳಿಸಿದರು.

ಮೂರೂ ಸಂಸ್ಥೆಯ ವಿದ್ಯಾರ್ಥಿಗಳು ವೈವಿದ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಪ್ರಸ್ತುತ ಪಡಿಸಿದರು.ಶಕ್ತಿ ಎಜ್ಯುಕೇಶನ್ ಟ್ರಸ್ಟ್‍ನ ಸದಸ್ಯ ಡಾ. ಮುರಳೀಧರ ನಾೈಕ್ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್, ಪ್ರಧಾನ ಸಲಹೆಗಾರ ರಮೇಶ್ ಕೆ., ಅಭಿವೃದ್ಧಿ ಅಧಿಕಾರಿ ನಸೀಮ್ ಬಾನು, ಶ್ರೀ ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆಯ ಮುಖ್ಯಸ್ಥೆ ನೀಮಾ ಸಕ್ಸೇನಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕು. ಚೇತನಾ ಕಾರ್ಯಕ್ರಮ ನಿರೂಪಿಸಿ, ರಿಷಿಕ್ ಮೊೈದಿನ್ ವಂದಿಸಿದರು.

Also Read  ಬೆಂಗಳೂರಿನಲ್ಲಿ ಮತ್ತೊಂದು ಹೀನ ಕೃತ್ಯ ➤ ಬಸ್ಸಿಗಾಗಿ ಕಾಯುತ್ತಿದ್ದ ಯುವತಿ ಮೇಲೆ ರೇಪ್ ಮಾಡಿದ ಆಟೋ ಚಾಲಕ

error: Content is protected !!
Scroll to Top