ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ ಆರೋಪಿಗಳ ಬಂಧನ ► ಕೊನೆಗೂ ಪ್ರಕರಣ ಬೇಧಿಸಿದ ಜಿಲ್ಲಾ ಪೊಲೀಸರು

(ನ್ಯೂಸ್ ಕಡಬ) newskadaba.com ಮಂಗಳೂರು, ಆ.15. ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣವನ್ನು ಕೊನೆಗೂ ಬೇಧಿಸಿರುವ ಪೊಲೀಸ್ ಇಲಾಖೆ ಘಟನೆಗೆ ಸಂಬಂಧಿಸಿ ಮೂವರನ್ನು ಬಂಧಿಸಿದ್ದಾರೆ.

ಜುಲೈ 4ರಂದು ಆರೆಸ್ಸೆಸ್ ಕಾರ್ಯಕರ್ತ ಬಿ.ಸಿ.ರೋಡ್ ಉದಯ ಲಾಂಡ್ರಿ ಮಾಲಕ ಶರತ್ ಮಡಿವಾಳರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಶರತ್‍ರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಜುಲೈ 7ರಂದು ರಾತ್ರಿ ಮೃತಪಟ್ಟಿದ್ದರು. ತಿಂಗಳ ನಂತರ ಶರತ್ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಕಲಂದರ್ ಶಾಫಿ, ನಾಸೀರ್ ಮತ್ತು ರಿಯಾಜ್ ರನ್ನು ಬಂಧಿಸಲಾಗಿದ್ದು, ಇನ್ನೋರ್ವ ಪ್ರಮುಖ ಆರೋಪಿ ವಿದೇಶಕ್ಕೆ ಪರಾರಿಯಾಗಿದ್ದಾನೆನ್ನಲಾಗಿದೆ. ಪಶ್ಚಿಮ ವಲಯ ಐಜಿಪಿ ಹರಿಶೇಖರನ್ ನೇತೃತ್ವದಲ್ಲಿ ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಈ ಬಗ್ಗೆ ಇಂದು ಸಂಜೆ ಮಂಗಳೂರಿನ ಐಜಿಪಿ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ಕರೆಯಲಾಗಿದ್ದು, ಇನ್ನೂ ಹೆಚ್ಚಿನ ಮಾಹಿತಿ ತಿಳಿದುಬರಲಿದೆ‌.

error: Content is protected !!
Scroll to Top