(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.15.ಕಡಬದ ಶ್ರೀ ಗಣೇಶ್ ಬಿಲ್ಡಿಂಗ್‍ನಲ್ಲಿ 73ನೇ ವರ್ಷದ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.
ಬಿಲ್ಡಿಂಗ್ ಮಾಲಕರಾದ ಸುಂದರ ಮಂಡೆಕರ ಧ್ವಜಾರೋಹಣ ನೆರವೇರಿಸಿ ಶುಭಹಾರೈಸಿದರು. ಗಣೇಶ್ ಬಿಲ್ಡಿಂಗ್‍ನ ಎಲ್ಲ ಅಂಗಡಿಗಳ ಮಾಲಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ಮೋಹನ್ ಕೊಯಿಲ ಕಾರ್ಯಕ್ರಮ ನಿರೂಪಿಸಿ, ಕಿಶೋರ್ ಬರಮೇಲು ವಂದಿಸಿದರು. ಬಳಿಕ ಎಲ್ಲರಿಗೂ ಸಿಹಿ ತಿಂಡಿ ಹಂಚಲಾಯಿತು.