ನೂಜಿಬಾಳ್ತಿಲ ಬೆಥನಿ ಕಾಲೇಜಿನಲ್ಲಿ 73ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.16.ಬೆಥನಿ ಕಾಲೇಜಿನಲ್ಲಿ 73ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ನಿವೃತ್ತ ಸೇನಾನಿ ಐಸಕ್ ಎಮ್.ಜೆಯವರು ಧ್ವಜಾರೋಹಣ ನೆರವೇರಿಸಿದರು. ಸಂಸ್ಥೆಯ ನಿರ್ದೇಶಕರಾದ ರೆ|ಫಾ|ಸಕರಿಯಾಸ್ ನಂದಿಯಾಟ್ ಶುಭಹಾರೈಸಿದರು. ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಬೆಥನಿ ವಿದ್ಯಾಸಂಸ್ಥೆಯಿಂದ ಗೋಳಿಯಡ್ಕ ಜಂಕ್ಷನ್‍ವರೆಗೆ ಮೆರವಣಿಗೆ ನಡೆದು ಬಳಿಕ ವಿದ್ಯಾಸಂಸ್ಥೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಪ್ರಾಚಾರ್ಯರಾದ ಜಾರ್ಜ್ ಟಿ.ಎಸ್ ಸ್ವಾಗತಿಸಿ, ಪ್ರೌಢವಿಭಾಗದ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಭಟ್ ವಂದಿಸಿದರು. ಉಪನ್ಯಾಸಕರು, ಶಿಕ್ಷಕರು-ಶಿಕ್ಷಕೇತರರು, ವಿದ್ಯಾರ್ಥಿಗಳು, ಉಪಸ್ಥಿತರಿದ್ದರು.

Also Read  ವಿಕಲಚೇತನರ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

error: Content is protected !!
Scroll to Top