ಬೋಳ್ನಡ್ಕ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ; ಮೊಸರು ಕುಡಿಕೆ ಉತ್ಸವ

(ನ್ಯೂಸ್ ಕಡಬ) newskadaba.com ಕಡಬ, ಆ .15,  ಕೊಂಬಾರು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಹಿಂದೂ ಜಾಗರಣ ವೇದಿಕೆ, ಶ್ರೀ ದುರ್ಗಾ ಗೆಳೆಯ ಬಳಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸಂಯುಕ್ತ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಅಚರಣಾ ಸಮಿತಿ ವತಿಯಿಂದ ಬೋಳ್ನಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಳದ ವಠಾರದಲ್ಲಿ ಮೊಸರು ಕುಡಿಕೆ ಉತ್ಸವ ಸೋಮವಾರ ನಡೆಯಿತು.

ಬೋಳ್ನಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಳದ ಅರ್ಚಕರಾದ ಸತ್ಯನಾರಾಯಣ ಭಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Scroll to Top