ದ.ಕ. ಜಿಲ್ಲಾ ಗೃಹರಕ್ಷಕದಳ ಕಚೇರಿ ➤ 73ನೇ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.17.ದ ಕ. ಜಿಲ್ಲಾ ಗೃಹರಕ್ಷಕ ದಳ ಕಚೇರಿಯಲ್ಲಿ ಆಗಸ್ಟ್ 15 ರಂದು ಬೆಳಿಗ್ಗೆ 7.15 ಗಂಟೆಗೆ 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಗೃಹರಕ್ಷಕ ದಳದ ಉಪ ಸಮಾದೇಷ್ಟರಾದ ರಮೇಶ್ ಧ್ವಜಾರೋಹಣ ಮಾಡಿದರು.

ರಮೇಶ್ ಅವರು ಮಾತನಾಡಿ ಮಹಾತ್ಮರ ತ್ಯಾಗ ಬಲಿದಾನ ಶ್ರಮ ಮತ್ತು ಹೋರಾಟದಿಂದ ಭಾರತಕ್ಕೆ ಸ್ವಾತಂತ್ರ್ಯ ಸಿಗುವಂತಾಯಿತು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಗುರುರಾಜ್ ರವರು ಎಲ್ಲರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭ ಹಾರೈಸಿದರು.

ಈ ಕಾರ್ಯಕ್ರಮದಲ್ಲಿ ಕಚೇರಿ ಪ್ರಥಮ ದರ್ಜೆ ಸಹಾಯಕಿ ಅನಿತಾ ಟಿ.ಎಸ್., ಮಂಗಳೂರು ಘಟಕದ ಘಟಕಾಧಿಕಾರಿ ಮಾರ್ಕ್‍ಶೇರ್, ಪುತ್ತೂರು ಘಟಕದ ಘಟಕಾಧಿಕಾರಿ ಅಭಿಮನ್ಯು ರೈ ಹಾಗೂ ಹಿರಿಯ ಗೃಹರಕ್ಷಕರಾದ ರಮೇಶ್ ಭಂಡಾರಿ ಹಾಗೂ 50 ಗೃಹರಕ್ಷಕ/ಗೃಹರಕ್ಷಕಿಯರು ಉಪಸ್ಥಿತರಿದ್ದರು.

Also Read  ಮಂಗಳೂರು: ದ್ವಿಚಕ್ರ ವಾಹನದಿಂದ ಬಿದ್ದು ಮಹಿಳೆ ಮೃತ್ಯು

error: Content is protected !!
Scroll to Top