ಕೊಂಕಣಿ ಮಾನ್ಯತಾ ದಿನಾಚರಣೆ ➤ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನ ಮಂಗಳೂರು

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.17. ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನ ಮಂಗಳೂರು ಇಲ್ಲಿ ಆಗಸ್ಟ್ 20 ರಂದು ಸಂಜೆ 6 ಗಂಟೆಗೆ ಕೊಂಕಣಿ ಮಾನ್ಯತಾ ದಿನಾಚರಣೆ ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾನಿಲಯ ಕೊಂಕಣಿ ಅಧ್ಯಯನ ಪೀಠ ಹಾಗೂ ಕೊಂಕಣಿ ಸ್ನಾತಕೋತ್ತರ ವಿಭಾಗ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಸಹಯೋಗದಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.


ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ದಕ್ಷಿಣ ವಿಧಾನಸಬಾ ಕ್ಷೇತ್ರದ ಶಾಸಕ ವೇದವಾಸ್ಯ ಕಾಮತ್ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ| ಪಿ.ಎಸ್. ಯಡಪಡಿತ್ತಾಯ ವಹಿಸಲಿದ್ದಾರೆ ಎಂದು ಡಾ. ಜಯವ0ತ ನಾಯಕ್ ಸ0ಯೋಜಕರು ಕೊ0ಕಣಿ ಅಧ್ಯಯನ ಪೀಠ ಮ0ಗಳೂರು ವಿಶ್ವವಿದ್ಯಾನಿಲಯ ಇವರ ಪ್ರಕಟಣೆ ತಿಳಿಸಿದೆ.

Also Read  ಆಂಧ್ರ ಪ್ರದೇಶದ ಸಿಎಂ ಪರಿಹಾರ ನಿಧಿ ಹೆಸರಿನಲ್ಲಿ ವಂಚನೆ ➤ ದ. ಕನ್ನಡ ಜಿಲ್ಲೆಯ ಆರು ಮಂದಿಯ ಬಂಧನ

error: Content is protected !!
Scroll to Top