ಲೋಕಾಯುಕ್ತರಿಂದ ದೂರು ಅರ್ಜಿ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.19.ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ನಿಗದಿಪಡಿಸುರುವ ದಿನದಂದು ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗಧಿತ ಪತ್ರದಲ್ಲಿ ನೀಡಬಹುದಾಗಿದೆ.

ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ತಹಶೀಲ್ದಾರರ ಕಛೇರಿ, ಮೂಡಬಿದ್ರೆ, ಆಗಸ್ಟ್ 22 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ತಹಶೀಲ್ದಾರರ ಕಛೇರಿ ಮಂಗಳೂರು, 26 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬಂಟ್ವಾಳ ತಾಲೂಕು ಕಛೇರಿ, 27 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೆಳ್ತಂಗಡಿ ತಾಲೂಕು ಕಛೇರಿ, 29 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸುಳ್ಯ ತಾಲೂಕು ಕಛೇರಿ, ಆಗಸ್ಟ್ 30 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಪುತ್ತೂರು ತಾಲೂಕು ಕಛೇರಿಗಳಲ್ಲಿ ನಡೆಯಲಿದೆ.ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ.

Also Read  ಐದನೇ ವರ್ಷಕ್ಕೆ ಪಾದಾರ್ಪಣೆ ಹಿನ್ನೆಲೆ ➤ ಕಡಬದ 'ಬಿರಿಯಾನಿ ಹೌಸ್' ನಲ್ಲಿ ವಿಶೇಷ ಆಫರ್

ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬಹುದಾಗಿದೆ.ಅನಾಮಧೇಯ ಅರ್ಜಿಗಳು ಬಂದಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಅರ್ಜಿದಾರರು ನಮೂನೆ I & IIರಲ್ಲಿ ಭರ್ತಿ ಮಾಡಿ ನೋಟರಿಯಿಂದ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಛೇರಿಗೆ ಅಥವಾ ನೇರವಾಗಿ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ/ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಅಧೀಕ್ಷಕರ ಕಛೇರಿ ದೂರವಾಣಿ ಸಂಖ್ಯೆ: 0824 – 2429197 8861688100, 9448530051, ಪೊಲೀಸ್ ನಿರೀಕ್ಷಕರ ಕಛೇರಿ ದೂರವಾಣಿ ಸಂಖ್ಯೆ: 0824-2427237, 9449044377 ಸಂಪರ್ಕಿಸಲು ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ ಇವರ ಪ್ರಕಟಣೆ ತಿಳಿಸಿದೆ.

Also Read  ದಿನಗೂಲಿ ಆಧಾರದಲ್ಲಿ ಭಿಕ್ಷಾಟನೆ ➤ 55ಕ್ಕೂ ಅಧಿಕ ಆರೋಪಿಗಳು ವಶಕ್ಕೆ

 

error: Content is protected !!
Scroll to Top