ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ➤ 6 ತಿಂಗಳ ತರಬೇತಿ ಕಾರ್ಯಗಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.20.ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ 2019-20ನೇ ಸಾಲಿನಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಆರು ತಿಂಗಳ ತರಬೇತಿ ಕಾರ್ಯಗಾರವನ್ನು ಆಯೋಜಿಸಲಾಗಿದೆ.

ಆಸಕ್ತ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಕಲಾಸಕ್ತರಿಗೆ ಗುರುಶಿಷ್ಯ ಪರಂಪರೆ ಯೋಜನೆಯಡಿ ಸುಗಮ ಸಂಗೀತ, ಶಾಸ್ತ್ರೀಯ ಸಂಗೀತ ಮತ್ತು ನೃತ್ಯ ಹಾಗೂ ಜಾನಪದ ಕಲಾಪ್ರಕಾರಗಳಲ್ಲಿ  ತರಬೇತಿ ಕಾರ್ಯಗಾರವನ್ನು ಆಯೋಜಿಸಲಾಗಿದೆ.ಈ ಶಿಬಿರದಲ್ಲಿ ವಿಶೇಷ ಘಟಕ ಯೋಜನೆಯಡಿ 20 ಜನ ಹಾಗೂ ಗಿರಿಜನ ಉಪಯೋಜನೆಯಡಿ 08 ಜನ ಶಿಬಿರಾರ್ಥಿಗಳಿಗೆ ಶಿಷ್ಯ ವೇತನ ನೀಡಲಾಗುವುದು. ಶಿಬಿರಾರ್ಥಿಗಳ ವಯಸ್ಸು ಕನಿಷ್ಠ 18 ವರ್ಷದಿಂದ 35 ವರ್ಷ ಒಳಗಿನವರಾಗಿರಬೇಕು. ಮಹಿಳೆಯರಿಗೆ ಮತ್ತು ಅಂಗವಿಕಲರಿಗೆ ನಿಯಮಾನುಸಾರ ಹೆಚ್ಚಿನ ಆದ್ಯತೆ ನೀಡಲಾಗುವುದು.

Also Read  ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯ ಉಂಟಾಗಿದೆ..!

ಅದರಂತೆ ತರಬೇತಿ ನೀಡಲು ಇಚ್ಚಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುರುಗಳಿಂದಲೂ (ತರಬೇತಿದಾರರು) ಅರ್ಜಿಯನ್ನು ಆಹ್ವಾನಿಸಲಾಗಿದೆ. ತರಬೇತಿದಾರರಿಗೆ ಸಂಭಾವನೆ ನೀಡಲಾಗುವುದು. ಸ್ವ ವಿವರಗಳನ್ನು ಒಳಗೊಂಡ ಅರ್ಜಿಯನ್ನು ಇತ್ತೀಚಿನ ಚಾಲ್ತಿಯಲ್ಲಿರುವ ಜಾತಿ ಪ್ರಮಾಣ ಪತ್ರದೊಂದಿಗೆ ಆಗಸ್ಟ್ 29 ರೊಳಗೆ ಕಚೇರಿ ಅವಧಿಯಲ್ಲಿ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಕಚೇರಿಯ ದೂರವಾಣಿ ಸಂಖ್ಯೆ 0824-2451527 ನ್ನು ಸಂಪರ್ಕಿಸಬಹುದಾಗಿದೆ. ಎಂದು ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಸøತಿ ಇಲಾಖೆ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top