ಕನ್ನಡ ಮಾಧ್ಯಮದಲ್ಲಿ ಹೆಚ್ಚು ಅಂಕಗಳಿಸಿದ ಕೇರಳ-ಗೋವಾ ವಿದ್ಯಾರ್ಥಿಗಳಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.21.ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೇರಳ-ಗೋವಾ ರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರಧಾನ ಸಮಾರಂಭ 2019-20 ಕಾರ್ಯಕ್ರಮವು ಆಗಸ್ಟ್ 25 ರಂದು ಬೆಳಿಗ್ಗೆ 11 ಗಂಟೆಗೆ ಎಡನೀರು ಮಠದ ಸಭಾಂಗಣ, ಕಾಸರಗೋಡು ಇಲ್ಲಿ ನಡೆಯಲಿದೆ.


ಕಾರ್ಯಕ್ರಮದ ಉದ್ಘಾಟನೆಯನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಾರ್ಯದರ್ಶಿ, ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಕಾರದ ಅಧ್ಯಕ್ಷ ಆರ್.ಆರ್.ಜನ್ಮ್ನ ನೆರವೇರಿಸಲಿದ್ದು, ಪ್ರಶಸ್ತಿ ಪ್ರದಾನವನ್ನು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಪಿ.ಎಸ್ ಎಡಪಡಿತ್ತಾಯ ನೆರವೇರಿಸಲಿದ್ದಾರೆ. ಕಾಸರಗೋಡು ಶಾಸಕರಾದ ಎನ್.ಎ ನೆಲ್ಲಿಕುನ್ನು ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ.


2019-20ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ತರಗತಿಗಳನ್ನು ಕನ್ನಡ ಮಾಧ್ಯಮದಲ್ಲಿ ಅಭ್ಯಸಿಸಿ ಅತಿಹೆಚ್ಚು ಅಂಕಗಳಿಸಿದ ಕೇರಳ ರಾಜ್ಯದ 142 ಹಾಗೂ ಗೋವಾ ರಾಜ್ಯದ 6 ವಿದ್ಯಾರ್ಥಿಗಳನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಶಾಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ 10000/- ರೂಪಾಯಿ, ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗೆ 9000/- ರೂಪಾಯಿ ಮತ್ತು ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗೆ 8000/- ರೂಪಾಯಿಗಳು ಜೊತೆಗೆ ಪ್ರಮಾಣ ಪತ್ರ ನೀಡಿ ಗೌರವಿಸಲಾಗುತ್ತದೆ.

Also Read  ಬಸ್‌ ಗಳಲ್ಲಿ ಕರ್ಕಶ ಹಾರ್ನ್, ಧ್ವನಿವರ್ಧಕ ಬಳಕೆ ವಿರುದ್ಧ ಕಾರ್ಯಾಚರಣೆ..!

error: Content is protected !!
Scroll to Top