ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಇಲಾಖೆಯಿಂದ ➤ ವಿಕಲಚೇತನರ ಅಹವಾಲು ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.22.ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಇಲಾಖೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಕುಂದು ಕೊರತೆಗಳ ಅಹವಾಲು ಸಭೆ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.


ವಿಕಲಚೇತನರು ತಮ್ಮ ಅಹವಾಲುಗಳು ಇದ್ದಲ್ಲಿ ಸಪ್ಟೆಂಬರ್ 5 ರೊಳಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಇಲಾಖೆ, ಜಿಲ್ಲಾ ಪಂಚಾಯತ್ ಕೊಟ್ಟಾರ ಮಂಗಳೂರು ಕಚೇರಿಗೆ ಕಚೇರಿಯ ವೇಳೆಯಲ್ಲಿ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್:- www.dwdsc.kar.nic.in ದೂರವಾಣಿ ಸಂಖ್ಯೆ: 0824-2458173/2455999 ಇಲ್ಲಿಗೆ ಸಂಪರ್ಕಿಸಲು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ, ದ.ಕ.ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  OTP ಕೊಟ್ಟು ಮೋಸ ಹೋದ ಯುವತಿ ➤ ಗ್ರಾಹಕರೇ ಎಚ್ಚರ ವಹಿಸಿ..!!

error: Content is protected !!
Scroll to Top