ಆಗಸ್ಟ್ 23ರಂದು ಜಿಲ್ಲಾಡಳಿತದ ವತಿಯಿಂದ ಶ್ರೀ ಕೃಷ್ಣ ಜಯಂತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.22.ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಇವರ ಆಶ್ರಯದಲ್ಲಿ ಆಗಸ್ಟ್ 23 ರಂದು ಬೆಳಿಗ್ಗೆ 10.30 ಗಂಟೆಗೆ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮವು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.


ಸಚಿವ ಕೋಟ ಶ್ರೀನಿವಾಸ ಪ್ರಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸ್ಕೃತ ಪ್ರಾಧ್ಯಾಪಕರಾದ ಡಾ|| ಶ್ರೀಶ ಕುಮಾರ ಎಂ.ಕೆ. ಇವರು ಶ್ರೀ ಕೃಷ್ಣ ಜಯಂತಿಯ ಸಂದೇಶವನ್ನು ನೀಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಕಟಣೆ ತಿಳಿಸಿದೆ.

Also Read  ಜುಲೈ 31 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆಶಿ

error: Content is protected !!
Scroll to Top