ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಢಿಕ್ಕಿಹೊಡೆದ ಕಾರು ➤ ಕಾರು ಚಾಲಕ ಹಾಗೂ ಶಾಸಕ ಎಸ್. ರಾಮದಾಸ್

(ನ್ಯೂಸ್ ಕಡಬ) newskadaba.com ಸುಳ್ಯ, ಆಗಸ್ಟ್.23.ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ರಾಮದಾಸ್ ಅವರು ಮೈಸೂರಿನಿಂದ ಸುಳ್ಯ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಗೇಟಿನ ಬಳಿಯಿರುವ ಮೋರಿಗೆ ಢಿಕ್ಕಿ ಹೊಡೆದ ಘಟನೆ ಇಂದು ಮುಂಜಾನೆ ಜಾಲ್ಸೂರಿನಲ್ಲಿ ನಡೆದಿದೆ.

ಕಾರು ಜಾಲ್ಸೂರಿನ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಬಳಿಗೆ ಮುಂಜಾನೆ 7.15ರ ಸುಮಾರಿಗೆ ತಲುಪಿದಾಗ ಕಾರು ಚಾಲಕ ನಿದ್ರೆ ಮಂಪರಿನಲ್ಲಿದ್ದ, ಪರಿಣಾಮ ಕಾರು ಚಾಲಕನ ನಿಯಂತ್ರಣ ತಪ್ಪಿ ಗೇಟಿನ ಬಳಿಯಿರುವ ಮೋರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗದ ಸೀಟಿನಲ್ಲಿ ಕುಳಿತಿದ್ದ ಶಾಸಕ ರಾಮದಾಸ್ ಅವರಿಗೆ ಅಲ್ಪ ಸ್ವಲ್ಪ ಗಾಯಗೊಂಡರು.ಈ ಸಂದರ್ಭದಲ್ಲಿ ಅಲ್ಲಿಯೇ ಸಮೀಪದ ಪೆಟ್ರೊಲ್ ಪಂಪ್ ನಲ್ಲಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರ ಸಹೋದರ ದಿ. ಭಾಸ್ಕರ ಗೌಡರ ಪುತ್ರ ಆಶಿಕ್ ಅವರು ಶಾಸಕ ರಾಮ್ ದಾಸ್ ಅವರನ್ನು ತಮ್ಮ ಕಾರಿನಲ್ಲಿ ಸುಳ್ಯದ ಆಸ್ಪತ್ರೆ ಕರೆತಂದರು ಎಂದು ತಿಳಿದುಬಂದಿದೆ. ಕಾರು ಚಾಲಕ ಹಾಗೂ ಶಾಸಕರು ಅಪಾಯದಿಂದ ಪಾರಾಗಿದ್ದಾರೆ.ಈ ಘಟನೆ ಇಂದು ಮುಂಜಾನೆ ಸಂಭವಿಸಿದೆ.

Also Read  ಭೂ ವೀಕ್ಷಣಾ ಉಪಗ್ರಹ ಇಒಎಸ್-08 ಅನ್ನು ಯಶಸ್ವಿಯಾಗಿ ಉಡಾಯಿಸಿದ ಇಸ್ರೋ

 

error: Content is protected !!
Scroll to Top