ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯಡಿ ➤ ಮಹಿಳೆಯರಿಗೆ ಉದ್ಯಮಶೀಲ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.24.ಮಹಿಳೆಯರಿಗೆ ವಿವಿಧ ವೃತ್ತಿಗಳ ಬಗ್ಗೆ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆ ಬಗ್ಗೆ ತರಬೇತಿ ನೀಡುವ ಮೂಲಕ ಮಹಿಳೆಯರ ಆರ್ಥಿಕ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಈ ಯೋಜನೆಯನ್ನು ಕೈಗೊಳ್ಳಲಾಗಿದೆ.

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಮಹಿಳಾ ತರಬೇತಿ ಕಾರ್ಯಕ್ರಮದಡಿ ವಿವಿಧ ವೃತ್ತಿ ತರಬೇತಿಗಳನ್ನು ನೀಡಲು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯಡಿ ಅಕ್ರಿಡೇಶನ್ ಪಡೆದಿರುವ ಸಂಸ್ಥೆಗಳಿಂದ ಆಗಸ್ಟ್ 30 ರೊಳಗೆ ಪ್ರಸ್ತಾವನೆಯನ್ನು ಆಹ್ವಾನಿಸಲಾಗಿದೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಲ ಅಭಿವೃದ್ಧಿ ಇಲಾಖೆ ಕಚೇರಿ ದೂರವಾಣಿ ಸಂಖ್ಯೆ: 0824-2458173 ಇಲ್ಲಿಗೆ ಸಂಪರ್ಕಿಸಬೇಕು ಎಂದು ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read    ಅಬ್ಬಕ್ಕ ಉತ್ಸವ - ಪೂರ್ವಭಾವಿ ಸಭೆ

error: Content is protected !!
Scroll to Top