ಭಾರತ ಸರ್ಕಾರದ ನೆಹರು ಯುವ ಕೇಂದ್ರ, ಮಂಗಳೂರು ಇವರಿಂದ ➤ ಜಿಲ್ಲಾ ಯುವ ಮಂಡಳಿ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.24.ಭಾರತ ಸರ್ಕಾರದ ನೆಹರು ಯುವ ಕೇಂದ್ರ, ಮಂಗಳೂರು ಇವರಿಂದ 2018-19ನೇ ಸಾಲಿಗೆ ಜಿಲ್ಲಾ ಯುವ ಮಂಡಳಿ ಪ್ರಶಸ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.


ಜಿಲ್ಲೆಯ ಆಸಕ್ತ ಯುವಕ –ಯುವತಿ ಮಂಡಳಗಳು ಅರ್ಜಿ ಸಲ್ಲಿಸಬಹುದಾಗಿದೆ. ಯುವ ಮಂಡಳಗಳು ಜಿಲ್ಲಾ ನೊಂದಾಣಾಧಿಕಾರಿಗಳ ಕಚೇರಿಯಲ್ಲಿ ನೋಂದಾವಣೆಯಾಗಿದ್ದು ಹಾಗೂ ನೆಹರು ಯುವ ಕೇಂದ್ರದಲ್ಲಿ ಸಂಯೋಜನೆ ಹೊಂದಿರಬೇಕು. ಕಳೆದ ಸಾಲಿನಲ್ಲಿ 2018-19ರಲ್ಲಿ ಗ್ರಾಮದ ಅಭಿವೃದ್ದಿಗಾಗಿ ಜನಪರ ಕಾರ್ಯಕ್ರಮಗಳನ್ನು ನಡೆಸಿರಬೇಕು. (ಸಾಕ್ಷಾರತೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯಕ್ರಮಗಳು, ಪರಿಸರ ಸಂರಕ್ಷಣೆ, ಕ್ರೀಡೆ, ಸಾಂಸ್ಕøತಿಕ, ಮಹಿಳಾ ಜಾಗೃತಿ, ವೃತ್ತಿಪರ ಶಿಕ್ಷಣ, ಗ್ರಾಮ ನೈರ್ಮಲ್ಯ, ಮಳೆ ನೀರು ಸಂಗ್ರಹ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ದಿನಗಳ ಆಚರಣೆ, ಶ್ರಮದಾನ ಇತ್ಯಾದಿ.

Also Read  Казино Pin Up Пин Ап Регистрируйся И Играй На Официальном Сайте

ಮಾಹಿತಿಯು ಎಪ್ರಿಲ್ 2018 ರಿಂದ ಮಾರ್ಚ್ 2019ರ ಒಳಗಿರಬೇಕು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಯುವ ಮಂಡಳಕ್ಕೆ ರೂ 25,000/- ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಅರ್ಜಿಯು ರಾಜ್ಯಮಟ್ಟಕ್ಕೆ ಅರ್ಹತೆಯನ್ನು ಪಡೆಯುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಸಪ್ಟೆಂಬರ್ 20. ಅರ್ಜಿಯನ್ನು ನೆಹರು ಯುವ ಕೇಂದ್ರ, ನೆಹರು ಮೈದಾನ್ ರೋಡ್, ಮಂಗಳೂರು-1 ಕಚೇರಿಯಿಂದ ಪಡೆಯಬಹುದು.ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ : 0824-2422264 ಇಲ್ಲಿಗೆ ಸಂಪರ್ಕಿಸಬೇಕು ಎಂದು ಜಿಲ್ಲಾ ಯುವಜನ ಸಮನ್ವಯಾಧಿಕಾರಿ ನೆಹರು ಯುವ ಕೇಂದ್ರ, ದಕ್ಷಿಣ ಕನ್ನಡ ಜಿಲ್ಲೆ ಇವರ ಪ್ರಕಟಣೆ ತಿಳಿಸಿದೆ.

Also Read  ಟೆಲಿಗ್ರಾಂ ಸಿಇಒ ಪಾವೆಲ್ ದುರೋವ್ ಅರೆಸ್ಟ್..!

error: Content is protected !!
Scroll to Top