ಮೊಸರು ಕುಡಿಕೆ ನಡೆಯುವ ಸಂಧರ್ಭಗಳಲ್ಲಿ ಎಲ್ಲಾ ಮದ್ಯದಂಗಡಿಗಳು ಬಂದ್

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.24.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 23 ರಿಂದ ಸಪ್ಟೆಂಬರ್ 1 ರವರೆಗೆ ವಿವಿಧ ಕಡೆಗಳಲ್ಲಿ ಮೊಸರು ಕುಡಿಕೆ ಮೆರವಣಿಗೆ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಲಿದ್ದಾರೆ.

ಸಮಯ ಅಮಲು ಪದಾರ್ಥ ಸೇವಿಸಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಮೊಸರು ಕುಡಿಕೆ ನಡೆಯುವ ಸ್ಥಳಗಳಲ್ಲಿ ಮೊಸರು ಕುಡಿಕೆ ನಡೆಯುವ ದಿನಾಂಕಗಳಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ವೈನ್‍ಶಾಪ್/ಬಾರ್‍ಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.

Also Read  ಸುರತ್ಕಲ್: ಅಸ್ವಸ್ಥ ಪ್ರಯಾಣಿಕನ ಜೀವ ಉಳಿಸಲು ಬಸ್ ನಿರ್ವಾಹಕನ ಹರಸಾಹಸ

error: Content is protected !!
Scroll to Top