ಮಂಗಳೂರು ನೇತ್ರಾವತಿ ಸೇತುವೆಯಿಂದ ಕೆಳಕ್ಕೆ ಹಾರಿದ್ದ ಕಡಬದ ಯುವಕ ➤ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಆ.26. ನಗರದ ಹೊರವಲಯದ ಉಳ್ಳಾಲ ನೇತ್ರಾವತಿ ಸೇತುವೆಯ ಬಳಿ ಬೈಕ್ ಇರಿಸಿ ನಾಪತ್ತೆಯಾಗಿದ್ದ ಕಡಬದ ನೂಜಿಬಾಳ್ತಿಲ ನಿವಾಸಿ ಸದಾಶಿವ (26) ಎಂಬಾತನ ಮೃತದೇಹವು ಭಾನುವಾರದಂದು ಸಮುದ್ರ ದಡದಿಂದ 12 ಕಿ.ಮೀ. ದೂರದಲ್ಲಿ ಪತ್ತೆಯಾಗಿದೆ.

ಕೋಸ್ಟ್‌ಗಾರ್ಡ್ ಸಿಬ್ಬಂದಿ ಭಾನುವಾರ ಸಮುದ್ರದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಪಣಂಬೂರು ಬಳಿಯ ಸಮುದ್ರ ತೀರದಲ್ಲಿ ತೇಲಾಡುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೂಡಲೇ ಪಣಂಬೂರು ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಶವವನ್ನು ಪರಿಶೀಲನೆ ನಡೆಸಿದಾಗ ನಾಪತ್ತೆಯಾದ ಸದಾಶಿವನದ್ದು ಎಂದು ತಿಳಿದುಬಂದಿದೆ. ಮೃತದೇಹದ ಮೇಲಿದ್ದ ರೈನ್‌ಕೋರ್ಟ್, ಕೈಯಲ್ಲಿ ಹಾಕಿದ್ದ ಕಡಗ ಮತ್ತು ಟ್ಯಾಟೂಗಳು ಸದಾಶಿವ ಅವರದ್ದೇ ಎಂದು ಸಂಬಂಧಿಕರು ಗುರುತು ಹಿಡಿದಿದ್ದಾರೆ.

Also Read  ಸಿಎಂಗೆ ಕಪ್ಪುಬಾವುಟ ಪ್ರದರ್ಶನ ➤ 9 ಮಂದಿ ವಿರುದ್ಧ FIR

error: Content is protected !!
Scroll to Top