ಸುಳ್ಯದ ಹಿರಿಯ ಪತ್ರಕರ್ತ ವಿಧಿವಶ

(ನ್ಯೂಸ್ ಕಡಬ) newskadaba.com ಸುಳ್ಯ, ಆಗಸ್ಟ್.26.ಹಿರಿಯ ಪತ್ರಕರ್ತ ಚಂದ್ರೇಶ್ ಗೋರಡ್ಕ ರವಿವಾರ ದಂದು ನಿಧನರಾದರು.ಮೃತ ಚಂದ್ರೇಶ್ ಗೋರಡ್ಕರವರಿಗೆ 48 ವರ್ಷ. ಅವರು ಲಿವರ್ ಸಂಬಂಧಿ ಕಾಯಿಲೆಯಿಂದ ಅಸ್ವಸ್ಥರಾಗಿದ್ದರು.

ಮಂಗಳೂರಿನ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.ಅದರೆ ಮತ್ತೆ ಲಿವರ್ ಹಾಗೂ ಕಿಡ್ನಿ ವೈಫಲ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಾರದ ಹಿಂದೆ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿಯೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಪತ್ನಿ , ಇಬ್ಬರು ಪುತ್ರರನ್ನು ಅಗಲಿದ್ದಾರೆ.

 

error: Content is protected !!
Scroll to Top