ಸ್ಕೂಟಿ ಮತ್ತು ಬೈಕ್ ಢಿಕ್ಕಿ ➤ ಸ್ಕೂಟಿ ಸವಾರ ಸಾವು

(ನ್ಯೂಸ್ ಕಡಬ) newskadaba.com ಸುಳ್ಯ, ಆಗಸ್ಟ್.26.ಆ.24 ರಂದು ರಾತ್ರಿ ಸುಳ್ಯ ತಾಲೂಕಿನ ಬೆಳ್ಳಾರೆ- ಸವಣೂರು ರಸ್ತೆಯ ಮುಕ್ಕೂರು ಸನಿಹದ ಕನರ್ತಮಜಲು‌ ಬಳಿ ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿ ಸ್ಕೂಟಿ ಸವಾರ ಮೃತಪಟ್ಟ ಘಟನೆ ನಡೆದಿದೆ.

ಸ್ಕೂಟಿ ಸವಾರ ತೀವ್ರಗಾಯಗೊಂಡಿದ್ದು ಅವರನ್ನು ತಕ್ಷಣ ಆಸ್ಪತ್ರೆ ಗೆ ಕೊಂಡೊಯ್ಯಲಾದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ.‌ಸ್ಕೂಟಿ ಇವರು ಪೆರುವಾಜೆ ಗ್ರಾಮದ ಅಡ್ಯತಕಂಡ ನಿವಾಸಿ ಪುರುಷೋತ್ತಮ ಗೌಡ ಅಡ್ಯತಕಂಡ (42)ವರ್ಷ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪುರುಷೋತ್ತಮ ಗೌಡ ಅವರು ಮುಕ್ಕೂರು ಪೆರುವಾಜೆ ಶ್ರೀ ಶಾರದೋತ್ಸವ ಸಮಿತಿ ಇದರ ಸ್ಥಾಪಕ ಅಧ್ಯಕ್ಷರಾಗಿಯು ಸೇವೆ ಸಲ್ಲಿಸಿದ್ದರು.

Also Read  ರಾಷ್ಟ್ರೀಯ ಶಿಕ್ಷಣ ಕರಡು ನೀತಿ-2019 ➤ ಸಂವಾದ ಕಾರ್ಯಕ್ರಮ

error: Content is protected !!
Scroll to Top