ಬಂಟ್ವಾಳ : ಆಗಸ್ಟ್ 28 ರಂದು ತ್ರೈಮಾಸಿಕ ಕೆ.ಡಿ.ಪಿ ಸಮೀಕ್ಷಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.27. ತಾಲೂಕು ಪಂಚಾಯತ್ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ, 2019-20ನೇ ಸಾಲಿನ ಬಂಟ್ವಾಳ ತಾಲೂಕು ಪಂಚಾಯತ್‍ನ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಸಮೀಕ್ಷಾ ಸಭೆಯು ಇಂದು ನಡೆಯಬೇಕಿತ್ತು.

ಆದರೆ ಕಾರಣಾಂತರಗಳಿಂದ ಆಗಸ್ಟ್ 28 ರಂದು ಬೆಳಿಗ್ಗೆ 10.30 ಗಂಟೆಗೆ ಮುಂದೂಡಲಾಗಿದೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ತಾಲೂಕು ಪಂಚಾಯತ್ ಬಂಟ್ವಾಳ ಇವರ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top