ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ➤ ಸ್ವಚ್ಛ ಸರ್ವೇಕ್ಷಣ – ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸಮೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.28.ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಗ್ರಾಮ ನೈರ್ಮಲ್ಯವನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಮಂತ್ರಾಲಯವು “ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2019” ರ ಕಾರ್ಯಕ್ರಮಕ್ಕೆ ಆಗಸ್ಟ್ 14 ರಂದು ಚಾಲನೆ ನೀಡಿದೆ.

ಸರ್ಕಾರದಿಂದ ನಿಯೋಜಿತ `ಇಪಿಸೋಸ್ ರಿಸರ್ಚ್ ಪ್ರೈವೇಟ್ ಲಿಮಿಟೆಡ್’ ತಂಡವು ಗ್ರಾಮಗಳಿಗೆ ಭೇಟಿ ನೀಡಿ ನಿಗದಿಗೊಳಿಸಿದ ಮಾನದಂಡಗಳ ಅನ್ವಯ ಪರಿಶೀಲಿಸಿ, ನೈರ್ಮಲ್ಯದ ಬಗ್ಗೆ ಮೌಲ್ಯಮಾಪನ ಮಾಡಿ ಜಿಲ್ಲೆಗಳಿಗೆ ಶ್ರೇಣಿಯನ್ನು ನೀಡಲಿದ್ದಾರೆ. ಉತ್ತಮ ಶ್ರೇಣಿ ಪಡೆದ ರಾಜ್ಯ ಮಟ್ಟ ಮತ್ತು ಜಿಲ್ಲೆಗಳಿಗೆ ಅಕ್ಟೋಬರ್ 2 ರಂದು ನವದೆಹಲಿಯಲ್ಲಿ ನಡೆಯುವ ಗಾಂಧಿಜಯಂತಿ ಕಾರ್ಯಕ್ರಮದಂದು ಪುರಸ್ಕಾರ ನೀಡಿ ಗೌರವಿಸಲಿದೆ.

ಆಗಸ್ಟ್ 15 ರಿಂದ ಸೆಪ್ಟೆಂಬರ್ 15 ರವರೆಗೆ ಸಮೀಕ್ಷೆ ನಡೆಯುತ್ತಿದ್ದು ಈ ಸಂದರ್ಭದಲ್ಲಿ ಗ್ರಾಮಗಳಲ್ಲಿರುವ ಶಾಲೆ, ಅಂಗನವಾಡಿ, ಸಾರ್ವಜನಿಕ ಸ್ಥಳಗಳು, ಜನವಸತಿ ಪ್ರದೇಶಗಳಲ್ಲಿ ನಿರ್ಮಿಸಿರುವ ಸಮುದಾಯ ಶೌಚಾಲಯ ಬಳಕೆ/ನಿರ್ವಹಣೆ, ಮಾರುಕಟ್ಟೆ, ಧಾರ್ಮಿಕ ಕೇಂದ್ರಗಳು ಇತ್ಯಾದಿ ಪ್ರದೇಶಗಳನ್ನು ಸುಸ್ಥಿತಿಯಲ್ಲಿಟ್ಟು ಸ್ವಚ್ಛತೆ ಮತ್ತು ನೈರ್ಮಲ್ಯವನ್ನು ಕಾಪಾಡುವುದು ಕಸವನ್ನು ಎಲ್ಲೆಂದರಲ್ಲಿ ಎಸೆಯದೆ ತಮ್ಮ ಪರಿಸರವನ್ನು ಸ್ವಚ್ಛವಾಗಿರಿಸಬೇಕು.

Also Read  ಇಂದು ಬೆಂಗಳೂರು, ಕೊಡಗು ಸೇರಿ ಕೆಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ; ಎಲ್ಲೋ ಅಲರ್ಟ್ ಘೋಷಣೆ

ಸೆಪ್ಟೆಂಬರ್ 15 ರವರೆಗೆ ದೇಶದಾದ್ಯಂತ ಚಾಲನೆಯಲ್ಲಿರುವ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2019ರ ಆಂದೋಲನದ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ನಾಗರೀಕರು ತಮ್ಮ ಮೊಬೈಲ್ Google Play storeನಲ್ಲಿ SSG-2019 app ಅನ್ನು ಡೌನ್ ಲೋಡ್ ಮಾಡಿ 4 ಸರಳ ಪ್ರಶ್ನೆಗಳಿಗೆ ಉತ್ತರಿಸುವ ಮೂಲಕ ಅಥವಾ ಟೋಲ್ ಫ್ರೀ ಸಂಖ್ಯೆ 18005720112 ಗೆ ಕರೆಮಾಡುವ ಮೂಲಕ ತಮ್ಮ ಅಭಿಪ್ರಾಯಗಳನ್ನು ನೀಡಿ ಜಿಲ್ಲೆಯು ರಾಷ್ಟ್ರದಲ್ಲಿ ಉತ್ತಮ ಶ್ರೇಣಿಯನ್ನು ಪಡೆಯಲು ಸಹಕರಿಸಬೇಕು.ಸಾಕ್ಷರತೆ ಮತ್ತು ಸ್ವಚ್ಛತೆಯಲ್ಲಿ ರಾಷ್ಟ್ರ ಮಟ್ಟದಲ್ಲೇ ಗುರುತಿಸಿಕೊಂಡ ದಕ್ಷಿಣ ಕನ್ನಡ ಜಿಲ್ಲೆಯ ಸ್ಥಾನವನ್ನು “ಸ್ವಚ್ಚ ಸವೇಕ್ಷಣ ಗ್ರಾಮೀಣ-2019’’ರ ಕಾರ್ಯಕ್ರಮದಲ್ಲಿ ಉತ್ತಮ ಶ್ರೇಣಿ ಪಡೆಯಲು ಜಿಲ್ಲೆಯ ಸಮಸ್ತ ನಾಗರೀಕರು ಕೈಜೋಡಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

Also Read  900 ಕೆ.ಜಿ.ಪಡಿತರ ಅಕ್ಕಿಯ ಅಕ್ರಮ ಸಾಗಾಟ: ಇಬ್ಬರು ಅರೆಸ್ಟ್..!

error: Content is protected !!
Scroll to Top