ರಾಷ್ಟ್ರೀಯ ಜನತಾ ನ್ಯಾಯಾಲಯ ➤ ಪ್ರಕರಣಗಳ ವಿಲೇವಾರಿಗೆ ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.28.ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇವರ ನಿರ್ದೇಶನದಂತೆ ಸಪ್ಟೆಂಬರ್ 14 ರಂದು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ನ್ಯಾಯಾಲಯಗಳ ಆವರಣದಲ್ಲಿ ರಾಷ್ಟ್ರೀಯ ಜನತಾ ನ್ಯಾಯಾಲಯದ ಬೈಠಕ್‍ಗಳನ್ನು ಹಮ್ಮಿಕೊಳ್ಳಲಾಗಿದೆ.


ಇದರ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಸಿವಿಲ್, ಕ್ರಿಮಿನಲ್, ಮೋಟಾರು ವಾಹನಗಳ ಅಪಘಾತ ಪ್ರಕರಣಗಳ ವಿಲೇವಾರಿಗಾಗಿಕ್ರಮಕೈಗೊಳ್ಳಲಾಗಿರುತ್ತದೆ ಹಾಗೂ ವಿವಿಧ ಬ್ಯಾಂಕ್‍ಗಳ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಈ ದಿನದಂದು ಬಗೆಹರಿಸಲು ಕ್ರಮಕೈಗೊಂಡಿದ್ದು, ಸಾರ್ವಜನಿಕರು, ನ್ಯಾಯವಾದಿಗಳು, ಬ್ಯಾಂಕ್ ಸಂಸ್ಥೆಗಳು, ವಿಮಾ ಸಂಸ್ಥೆಗಳು ಹಾಗೂ ವಿವಿಧ ಸರ್ಕಾರಿ ಇಲಾಖೆಗಳು ಇದರಲ್ಲಿ ಭಾಗವಹಿಸಿ ಸದುಪಯೋಗ ಪಡೆಯಲು ದ.ಕ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

Also Read  ಜಲಪ್ರದೇಶಗಳಿಗೆ ಪ್ರವೇಶ ನಿರ್ಬಂಧ ಆದೇಶ ಹಿಂತೆಗೆತ

error: Content is protected !!
Scroll to Top