ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಕಚೇರಿ ➤ ತ್ರೈಮಾಸಿಕ ಅಂಚೆ ಅದಾಲತ್

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.28.ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಕಚೇರಿ ಬಲ್ಮಠದಲ್ಲಿ ತ್ರೈಮಾಸಿಕ ಅಂಚೆ ಅದಾಲತ್ ಸೆಪ್ಟೆಂಬರ್ 6 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.


ಸಾರ್ವಜನಿಕರು ಮಂಗಳೂರು ಅಂಚೆ ವಿಭಾಗಕ್ಕೆ ಸಂಬಂಧಪಟ್ಟ ದೂರುಗಳನ್ನು ಅಂಚೆ ಅದಾಲತ್ ತಲೆಬರಹದಡಿಯಲ್ಲಿ ಸೆಪ್ಟೆಂಬರ್ 4 ರೊಳಗೆ ಹಿರಿಯ ಅಂಚೆ ಅಧೀಕ್ಷಕರು, ಮಂಗಳೂರು ವಿಭಾಗ, ಬಲ್ಮಠ ಮಂಗಳೂರು 575002 ವಿಳಾಸಕ್ಕೆ ಅಥವಾ ದೂರುಗಳನ್ನು ವಾಟ್ಸಾಪ್ ಸಂಖ್ಯೆ 9448291072 ಕಳುಹಿಸಬಹುದು. ಮಂಗಳೂರು ಅಂಚೆ ವಿಭಾಗಕ್ಕೆ ಸಂಬಂಧಪಟ್ಟ ದೂರುಗಳನ್ನು ಮಾತ್ರ ಕಳುಹಿಸಬೇಕು ಎಂದು ಹಿರಿಯ ಅಂಚೆ ಅಧೀಕ್ಷಕರು ಮಂಗಳೂರು ವಿಭಾಗ ಇವರ ಪ್ರಕಟಣೆ ತಿಳಿಸಿದೆ.

Also Read  ಮರಳು ನೀತಿ ಸರಳೀಕರಣಗೊಳಿಸಿ ಸರಕಾರದಿಂದ ಆದೇಶ ► ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್

error: Content is protected !!
Scroll to Top