ಕನ್ನಡ ಮತ್ತು ಸಂಸ್ಕೃತ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ➤ ಗಿರಿಜನ ಉತ್ಸವಕ್ಕೆ ಕಲಾವಿದರಿಂದ ಅರ್ಜಿ ಅಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.29.ಕನ್ನಡ ಮತ್ತು ಸಂಸ್ಕೃತ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಗಿರಿಜನ ಉತ್ಸವಕ್ಕೆ ಕಲಾವಿದರಿಂದ ಅರ್ಜಿ ಅಹ್ವಾನಿಸಲಾಗಿದೆ.

ಗಿರಿಜನ ಉಪಯೋಜನೆಯಡಿ ಗಿರಿಜನ ಉತ್ಸವ ಕಾರ್ಯಕ್ರಮದಲ್ಲಿ ಯಕ್ಷಗಾನ, ನಾಟಕ, ಶಾಸ್ತ್ರೀಯ, ನೃತ್ಯ, ಜಾನಪದ ಪ್ರದರ್ಶನ ಕಲಾ ತಂಡಗಳು, ದಾಸರ ಪದಗಳು, ತತ್ವಪದ, ಗೀಗಿಪದ, ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದುಸ್ಥಾನಿ ವಾದ್ಯ ಸಂಗೀತ, ಹಾಡುಗಾರಿಕೆ, ಕರ್ನಾಟಕ ವಾದ್ಯ ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಪರಿಶಿಷ್ಟ ಪಂಗಡ ವಿಭಾಗದ ಕಲಾವಿದರಿಗೆ ಮಾತ್ರ ಈ ಉತ್ಸವದಲ್ಲಿ ಕಲಾಪ್ರದರ್ಶನ ನೀಡಲು ಅವಕಾಶವಿದೆ.

ಆದುದರಿಂದ ಪರಿಶಿಷ್ಟ ಪಂಗಡದ ಆಸಕ್ತ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರ ಹಾಗೂ ಈ ಹಿಂದೆ ಕಾರ್ಯಕ್ರಮ ನೀಡಿದ ದಾಖಲೆಗಳೊಂದಿಗೆ ಅರ್ಜಿಯನ್ನು ಸಪ್ಟೆಂಬರ್ 7 ರೊಳಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತುಳು ಭವನ, ಉರ್ವಸ್ಟೋರ್ ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆ, ಇಲ್ಲಿಗೆ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0824-2451527, ಇಲ್ಲಿಗೆ ಸಂಪರ್ಕಿಸಬೇಕು ಎಂದು ಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಪೇರಡ್ಕ: ನೂತನ ಗ್ರಾ.ಪಂ. ಅಧ್ಯಕ್ಷರಾಗಿ ಆಯ್ಕೆಯಾದ ಜಿ.ಕೆ ಹಮೀದ್ ರವರಿಗೆ ಸನ್ಮಾನ

error: Content is protected !!
Scroll to Top