ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದ. ಕ ಜಿಲ್ಲೆ ವತಿಯಿಂದ ➤ ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭಕ್ಕೆ ಕಲಾವಿದರಿಂದ ಅರ್ಜಿ ಅಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.29.  ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭಕ್ಕೆ ಕಲಾವಿದರಿಂದ ಅರ್ಜಿ ಅಹ್ವಾನಿಸಲಾಗಿದೆ.

  ಆಯೋಜಿಸಲಾಗುವ ಚಿಗುರು, ಯುವ ಸೌರಭ, ಸಂಸ್ಕೃತಿಕ ಸೌರಭ ಕಾರ್ಯಕ್ರಮದಲ್ಲಿ ಶಾಸ್ತ್ರೀಯ ಸಂಗೀತ, ಕರ್ನಾಟಕ/ಹಿಂದುಸ್ಥಾನಿ ವಾದ್ಯ ಸಂಗೀತ ಕರ್ನಾಟಕ/ಹಿಂದುಸ್ಥಾನಿ ಸಂಗೀತ, ಸುಗಮ ಸಂಗೀತ/ವಚನ ಸಂಗೀತ/ತತ್ವಪದ/ದಾಸರಪದ, ಜನಪದ ಗೀತೆಗಳು, ಸಮೂಹ ನೃತ್ಯ/ನೃತ್ಯ ರೂಪಕ, ಶಾಸ್ತ್ರೀಯ ನೃತ್ಯ-ಭರತನಾಟ್ಯ ,ಕಥಕ್, ಮೋಹಿನಿಯಾಟಂ ,ಕೂಚಿಪುಡಿ ಒಡೆಸ್ಸಿ, (ಸೋಲೋ/ಯುಗಳ ನೃತ್ಯ), ಜನಪದ ಪ್ರದರ್ಶನ ಕಲಾ ತಂಡಗಳು, ನಾಟಕ, ಯಕ್ಷಗಾನ, ಮೂಡಲಪಾಯ, ಬಯಲಾಟ, ಗೊಂಬೆಮೇಳ, ಇತ್ಯಾದಿ ಈ ಕಾರ್ಯಕ್ರಮದಲ್ಲಿ ಕಲಾ ಪ್ರದರ್ಶನ ನೀಡಲು ಅವಕಾಶವಿದೆ.

ಆಯ್ಕೆಯಾದ ಕಲಾವಿದರು ಇಲಾಖೆ ನಿಗದಿಪಡಿಸಿದ ಸ್ಥಳ ಮತ್ತು ದಿನಾಂಕಗಳಂದು ಕಾರ್ಯಕ್ರಮ ನೀಡಬೇಕು.6 ರಿಂದ 14 ವರ್ಷದೊಳಗಿನ ಪ್ರತಿಭಾವಂತ ಮಕ್ಕಳಿಗೆ ಚಿಗುರು ಕಾರ್ಯಕ್ರಮ, 15 ರಿಂದ 30 ವರ್ಷದೊಳಗಿನ ಪ್ರತಿಭಾವಂತ ಯುವ ಕಲಾವಿದರಿಗೆ ಯುವ ಸೌರಭ ಕಾರ್ಯಕ್ರಮ ಮತ್ತು ಆಕಾಶವಾಣಿ ಬಿ ಹೈ ಗ್ರೇಡ್ ಹಾಗೂ ಸರ್ಕಾರದಿಂದ ಕೊಡಮಾಡುವ ಪ್ರಶಸ್ತಿ ಪುರಸ್ಕೃತ ಕಲಾವಿದರಿಂದ ಸಂಸ್ಕೃತಿಕ ಸೌರಭಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಕಲಾವಿದರು ತಮ್ಮ ದಾಖಲೆಗಳೊಂದಿಗೆ ಅರ್ಜಿಯನ್ನು ಸಪ್ಟೆಂಬರ್ 7 ರೊಳಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತುಳು ಭವನ, ಉರ್ವಸ್ಟೋರ್ ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆ, ಇಲ್ಲಿಗೆ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0824-2451527, ಇಲ್ಲಿಗೆ ಸಂಪರ್ಕಿಸಬೇಕು ಎಂದು ಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ದೇವಸ್ಥಾನಗಳಲ್ಲಿ RSS ಶಾಖೆ ➤ ತರಭೇತಿಗಳನ್ನು ನಿಷೇಧಿಸಿ ಆದೇಶ ಹೊರಡಿಸಿದ ಸರಕಾರ

error: Content is protected !!
Scroll to Top