ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ಪ್ರವಾಸ ➤ ಅಹವಾಲು ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.29. ಮಂಗಳೂರು ಲೋಕಾಯುಕ್ತ ವಿಭಾಗದ ಅಧಿಕಾರಿಗಳು ಜಿಲ್ಲೆಯ ವಿವಿಧ ಸ್ಥಳಗಳಿಗೆ ವಿವಿಧ ದಿನ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ಸಾರ್ವಜನಿಕ ಕುಂದು ಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆಯನ್ನು ನಡೆಸಲಿದ್ದಾರೆ.

ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ಸಲ್ಲಿಸಬಹುದಾಗಿದೆ.ಸಾರ್ವಜನಿಕರು ತಮ್ಮ ಅಹವಾಲನ್ನು ಅರ್ಜಿ ರೂಪದಲ್ಲಿ ಸಂಬಂಧಪಟ್ಟ ದಾಖಲಾತಿಗಳ ಪ್ರತಿಯೊಂದಿಗೆ ತ್ರಿಪ್ರತಿಯಲ್ಲಿ ತರಬೇಕು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ.

ಪ್ರವಾಸ ಈ ರೀತಿ ಇವೆ;ಸಪ್ಟೆಂಬರ್ 5 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಂಗಳೂರಿನಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಸಪ್ಟೆಂಬರ್ 7 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಬಂಟ್ವಾಳ ತಾಲೂಕು ಕಚೇರಿ, ಸಪ್ಟೆಂಬರ್ 9 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಪುತ್ತೂರು ತಾಲೂಕು ಕಚೇರಿ, ಸಪ್ಟೆಂಬರ್ 11 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಬೆಳ್ತಂಗಡಿ ತಾಲೂಕು ಕಚೇರಿ, ಸಪ್ಟೆಂಬರ್ 13ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಸುಳ್ಯ ತಾಲೂಕು ಕಚೇರಿ, ಸಪ್ಟೆಂಬರ್ 16ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಮೂಡಬಿದ್ರೆ ನಿರೀಕ್ಷಣಾ ಮಂದಿರ, ಸಪ್ಟೆಂಬರ್ 18ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಡಬ ಪೇಟೆಯ ಡಾ. ಬಿ.ಆರ್ ಅಂಬೇಡ್ಕರ್ ಭವನ, ಸಪ್ಟೆಂಬರ್ 20 ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಮೂಲ್ಕಿ ಪುರಸಭೆ ಕಚೇರಿ ಸಭಾಂಗಣ, ಸಪ್ಟೆಂಬರ್ 23 ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆ ಉಳ್ಳಾಲ ನಗರಸಭೆ ಕಚೇರಿಯ ಸಭಾಂಗಣದಲ್ಲಿ ವಿಚಾರಣೆ ನಡೆಸಲಿದ್ದಾರೆ.

Also Read  ‘ಡಿ’ವರ್ಗ ಸರಕಾರಿ ನೌಕರರ ವಾರ್ಷಿಕ ಮಹಾಸಭೆ

ಯಾವುದೇ ದುರುದ್ದೇಶದಿಂದ ಕೂಡಿದ ದೂರುಗಳನ್ನಾಗಲಿ ವ್ಯರ್ಥ ವಾಗ್ವಾದಗಳನ್ನಾಗಲಿ ಅನಾಮಧೇಯ ಅರ್ಜಿಗಳನ್ನಾಗಲಿ, ನ್ಯಾಯಾಲಯದಲ್ಲಿ ಈಗಾಗಾಲೇ ವಿಚಾರಣೆಯಲ್ಲಿರುವ ದೂರುಗಳು ಬಂದಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಅರ್ಜಿಯ ನಮೂನೆ 1 ಮತ್ತು 2 ನ್ನು ಸ್ಥಳದಲ್ಲೇ ವಿತರಿಸಲಾಗುವುದು.ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಅಧೀಕ್ಷಕರ ಕಚೇರಿ ದೂರವಾಣಿ ಸಂಖ್ಯೆ:0824-2429197, 9448390987, ಪೊಲೀಸ್ ಉಪಾಧೀಕ್ಷಕರ-1 ಕಚೇರಿ ದೂರವಾಣಿ ಸಂಖ್ಯೆ:0824-2453420, 8861688100 ಪೊಲೀಸ್ ಉಪಾಧೀಕ್ಷಕರ-2 ಕಚೇರಿ ದೂರವಾಣಿ ಸಂಖ್ಯೆ:0824-2453420, 7026994128 ಪೊಲೀಸ್ ನಿರೀಕ್ಷಕರ ಕಚೇರಿ ದೂರವಾಣಿ ಸಂಖ್ಯೆ; 0824-2427237, 9449044377 ಸಂಪರ್ಕಿಸಲು ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  Benefits of a Business VDR

error: Content is protected !!
Scroll to Top