‘ಇತಿಹಾಸ ಅರಿತು ಇತಿಹಾಸ ನಿರ್ಮಿಸುವಂತವರಾಗಿ’ ➤ ಶಾಸಕ ಯು.ಟಿ ಖಾದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.30.ಇಡೀ ವಿಶ್ವದಲ್ಲೇ ನಮ್ಮ ದೇಶದ ಹಾಕಿ ಕ್ರೀಡೆಗೆ ಮತ್ತು ದೇಶಕ್ಕೆ ಗೌರವಯುತ ಸ್ಥಾನಮಾನ ಇದೆ. ಅಂದರೆ ಅದು ಹಾಕಿ ಮಾಂತ್ರಿಕ ಮೇಜರ್ ಧ್ಯಾನ್‍ಚಂದ್ ಪ್ರಮುಖ ಕಾರಣ ಎಂದು ಶಾಸಕ ಯು.ಟಿ ಖಾದರ್ ಹೇಳಿದರು.


ಗುರುವಾರ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಮಂಗಳೂರು ಮತ್ತು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಹಾಕಿಮಾಂತ್ರಿಕ ಮೇಜರ್ ಧ್ಯಾನ್‍ಚಂದ್‍ರವರ ಹುಟ್ಟುಹಬ್ಬದ ಪ್ರಯುಕ್ತ “ರಾಷ್ಟ್ರೀಯ ಕ್ರೀಡಾ ದಿನಾಚರಣೆ-2019” ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳು ಹಾಗೂ ಕ್ರೀಡಾಪಟುಗಳು ಧ್ಯಾನ್‍ಚಂದ್‍ರ ಆತ್ಮಕಥೆಯನ್ನು , ಅವರ ಜೀವನದ ಯಶೋಗಾತೆಯನ್ನು ತಿಳಿದು ಅವರಂತೆ ದೇಶದ ಕೀರ್ತಿ ಪತಾಕೆಯನ್ನು ವಿಶ್ವದ್ಯಾದಂತ ಹಾರಿಸಿ ಆದ್ದರಿಂದ ಇತಿಹಾಸವನ್ನು ಅರಿತು ಇತಿಹಾಸ ನಿರ್ಮಿಸುವಂತರಾಗಬೇಕು.

ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸಿ ಸದೃಢವಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಿ ಹಾಗೂ ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಕೇವಲ ಅಂಕಗಳೇ ಜೀವನಕ್ಕೆ ಅವಶ್ಯಕವಲ್ಲ ಅದರ ಜೊತೆಗೆ ಸಾಮಾನ್ಯ ಜ್ಞಾನವು ತುಂಬ ಮುಖ್ಯ ಎಂದು ಅವರು ಹೇಳಿದರು.ಶಾಸಕ ಐವನ್ ಡಿಸೋಜಾ ಮಾತನಾಡಿ, ಧ್ಯಾನ್‍ಚಂದ್‍ರವರು ಇಡೀ ದೇಶಕ್ಕೆ ಮಾದರಿ, ಅವರಂತ ಹಾಕಿ ಮಾಂತ್ರಿಕ ಆಟಗಾರ ಜಗತ್ತಿನಲ್ಲೇ ಮತ್ತೊರ್ವರಿಲ್ಲ. ನಮ್ಮ ದೇಶಕ್ಕೆ ಮೇಜರ್ ಧ್ಯಾನ್‍ಚಂದ್ ಹೆಮ್ಮೆ, ಜಿಲ್ಲೆಯಿಂದ ಸಾಕಷ್ಟು ಕ್ರೀಡಾಪಟುಗಳು ವಿವಿಧ ಕ್ರೀಡೆಯಲ್ಲಿ ಸಾಧನೆ ಮಾಡುತ್ತಿದ್ದಾರೆ. ಆದ್ದರಿಂದ ಎಲ್ಲಾ ಕ್ರೀಡೆಗಳ ಜೊತೆಗೆ ಹಾಕಿ ಕ್ರೀಡೆಗೆ ಪ್ರೋತ್ಸಾಹ ನೀಡಬೇಕಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಗ್ರಾಮೀಣ ಭಾಗದ ಸಂಘ ಸಂಸ್ಥೆಗಳು ಮತ್ತು ಯುವಕ ಮಂಡಳಿಗಳು ಕ್ರೀಡೆ ತಮ್ಮದೇ ಆದ ಸೇವೆಯನ್ನು ಸಲ್ಲಿಸುತ್ತಿವೆ. ಹಾಗಾಗಿ ಅಂತಹ ಸಂಸ್ಥೆಗಳಿಗೆ ಪ್ರೋತ್ಸಾಹ ಮತ್ತು ಉತ್ತೇಜನ ನೀಡುವುದಕ್ಕೆ ಕ್ರೀಡಾ ಕಿಟ್ ನ್ನು ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸೆಲ್ವಮಣಿ ಆರ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಉಪ್ಪಿನಂಗಡಿ, ದೈಹಿಕ ಶಿಕ್ಷಣ ನಿರ್ದೇಶಕರಾದ ಎವರೆಸ್ಟ್ ರೋಡ್ರಿಗಸ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಉಪನಿರ್ದೇಶಕರಾದ ಪ್ರದೀಪ್ ಡಿಸೋಜಾ ಮತ್ತು ಜಿಲ್ಲಾ ಯುವಜನ ಒಕ್ಕೂಟ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ಮಂಗಳಾ ಬ್ಯಾಡ್ಮಿಂಟನ್ ಅಸೋಸಿಯೇಶನ್ ಅಧ್ಯಕ್ಷ ಬಿ.ಎಸ್. ಭಂಡಾರಿ, ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು ತಾಲೂಕು ಅಧ್ಯಕ್ಷರು ಗಿರೀಶ್ ಶೆಟ್ಟಿ, ಜಿಲ್ಲಾ ಫುಟ್‍ಬಾಲ್ ಅಸೋಸಿಯೇಶನ್ ಅಧ್ಯಕ್ಷ ಅಸ್ಲಂ, ವಿಶೇಷ ಒಲಂಪಿಕ್ಸ್‍ನ ನಿರ್ದೇಶಕ ನಾರಾಯಣ ಶೇರಿಗಾರ್ ಹಾಗೂ ವಿವಿಧ ಕ್ರೀಡಾಪಟುಗಳು ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!

Join the Group

Join WhatsApp Group