ಕನ್ನಡ ಓದು ಬರಹ ಬಲ್ಲಂತಹ ಹಾಗೂ ಸ್ವ ಉದ್ಯೋಗ ಕೈಗೊಳ್ಳಲು ಆಸಕ್ತಿಯುಳ್ಳ ಯುವಕರಿಗೊಂದು ಇಲ್ಲಿದೆ ಒಂದು ಸುವರ್ಣ ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.31.ಉಜಿರೆ ರುಡ್‍ಸೆಟ್ ಸಂಸ್ಥೆಯಲ್ಲಿ ಸೆಪ್ಟೆಂಬರ್ 11 ರಿಂದ ಅಕ್ಟೋಬರ್ 10 ರವರೆಗೆ ಎಲೆಕ್ಟ್ರಿಕಲ್ ವಯರಿಂಗ್ ಮತ್ತು ಎಲೆಕ್ಟ್ರಿಕಲ್ ಉಪಕರಣಗಳ ರಿಪೇರಿ ತರಬೇತಿ ಕಾರ್ಯಕ್ರಮ ಪ್ರಾರಂಭವಾಗಲಿದೆ.

ಈ ಕ್ಷೇತ್ರದಲ್ಲಿ ಸ್ವ ಉದ್ಯೋಗ ಕೈಗೊಳ್ಳಲು ಆಸಕ್ತಿ ಇರುವವರು ತರಬೇತಿಯಲ್ಲಿ ಭಾಗವಹಿಸಬಹುದು. 18 ರಿಂದ 45 ವರ್ಷಗಳ ವಯೋಮಿತಿಯ ಕನ್ನಡ ಓದು ಬರಹ ಬಲ್ಲ ಯುವಕರು ಅರ್ಜಿ ಸಲ್ಲಿಸಬಹುದು. ಬಿಳಿ ಹಾಳೆಯಲ್ಲಿ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ನಿರ್ದೇಶಕರು, ರುಡ್‍ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ 574 240, ಬೆಳ್ತಂಗಡಿ ತಾಲೂಕು, ದ.ಕ. ಇವರಿಗೆ ಕಳುಹಿಸಬಹುದು ಅಥವಾ ಸಂಸ್ಥೆಯ online ವೆಬ್‍ಸೈಟ್ ಮೂಲಕ www.rudsetujire.com ಗೆ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08256-236404 ಗೆ ಸಂಪರ್ಕಿಸಬೇಕು ಎಂದು ರುಡ್‍ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top